spot_img
Thursday, April 2, 2026
spot_img

ʼಯಾವನವನು ಎಸ್‌ಪಿ ?ʼ : ಸಂಯಮ ಕಳೆದುಕೊಂಡು ಕಪಾಳಮೋಕ್ಷಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಳಗಾವಿ) : ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್‌ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ಕಪಾಳ ಮೋಕ್ಷಕ್ಕೆ ಮುಂದಾದ ಘಟನೆ ನಡೆಯಿತು. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಸಿಎಂ ಕೈ ಎತ್ತಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗತೊಡಗಿದೆ.

ಬೆಲೆ ಏರಿಕೆ ವಿರೋಧಿಸಿ ಇಂದು(ಸೋಮವಾರ) ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು. ಪಾಕ್ ಜೊತೆ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ.

ಈ ವೇಳೆ ಸಂಯಮ ಕಳೆದುಕೊಂಡ ಸಿಎಂ ಹೆಚ್ಚುವರಿ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಸಮಾವೇಶಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಆಗಮಿಸಿದ್ದರು. ಬೇರೆ ನಾಯಕರ ಭಾಷಣದವರೆಗೆ ಸುಮ್ಮನೇ ಕುಳಿತಿದ್ದ ಕಾರ್ಯಕರ್ತೆಯರು ಸಿಎಂ ಭಾಷಣ ಮಾಡುವಾಗ ಕಪ್ಪು ಪಟ್ಟಿಯನ್ನು ತೋರಿಸಿ ಪ್ರತಿಭಟಿಸಿದರು.

ಇದ್ದಕ್ಕಿದ್ದಂತೆ ತನ್ನ ಮುಂಭಾಗವೇ ಪ್ರತಿಭಟನೆ ನೋಡಿ ಸಿಎಂ ಒಂದು ಕ್ಷಣ ಭಾಷಣ ಮಾಡುವುದನ್ನು ನಿಲ್ಲಿಸಿದರು. ನಿಲ್ಲಿಸಿದ ಬಳಿಕ ʼಯಾವನವನು ಎಸ್‌ಪಿ ?ʼ ಎಂದು ಹೇಳಿ ವೇದಿಕೆಗೆ ಬರುವಂತೆ ಹೇಳಿದ್ದಾರೆ. ಹೆಚ್ಚುವರಿ ಎಸ್‌ಪಿ ಬರುತ್ತಿದ್ದಂತೆ ಏನ್ರೀ ಇದು, ಏನು ಮಾಡ್ತಾ ಇದ್ದೀರಿ ಎಂದು ಪ್ರಶ್ನಿಸಿದ್ದಲ್ಲದೇ, ಕೈ ಎತ್ತಿ ಸಿಟ್ಟು ಹೊರಹಾಕಿದ್ದಾರೆ. ನಂತರ ಸಚಿವ ಎಂಬಿ ಪಾಟೀಲ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಸಮಾಧಾನಪಡಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!