spot_img
Thursday, April 2, 2026
spot_img

‘ಕುಂದಾಪ್ರ ಡಾಟ್ ಕಾಂ’ಗೆ ಸಾಹಿತ್ಯ ಸಮ್ಮೇಳನ ಗೌರವ

ಕುಂದಾಪುರ: ಉಡುಪಿ ರಾಜಾಂಗಣದಲ್ಲಿ ಜರುಗಲಿರುವ ಉಡುಪಿ ಜಿಲ್ಲಾ ಹದಿನೇಳನೇ ಸಾಹಿತ್ಯ ಸಮ್ಮೇಳನದ ಸಂಘ ಸಂಸ್ಥೆ ವಿಭಾಗದ ಗೌರವಕ್ಕೆ ಕುಂದಾಪ್ರ ಡಾಟ್ ಕಾಂ ಪಾತ್ರವಾಗಿದೆ.

ಕುಂದಾಪುರ ತಾಲೂಕಿನ ಮೊದಲ ಪೂರ್ಣ ಪ್ರಮಾಣದ ಪೋರ್ಟೆಲ್ ಆಗಿ 2012ರಲ್ಲಿ ಆರಂಭಗೊಂಡ ಕುಂದಾಪ್ರಡಾಟ್ ಕಾಂ ಕಳೆದ ಹದಿಮೂರು ವರ್ಷಗಳಿಂದ ಸ್ಥಳೀಯ ಸುದ್ದಿ-ಮಾಹಿತಿ, ವಿಚಾರ ವೈಶಿಷ್ಟತೆಗಳನ್ನು ನಿರಂತರವಾಗಿ ಪ್ರಕಟಿಸುತ್ತಾ, ಕುಂದಾಪುರ-ಬೈಂದೂರು ತಾಲೂಕು ಹಾಗೂ ಜಿಲ್ಲೆಯಲ್ಲಿ ವಿವಿಧ ವಿಚಾರ ವಿಶಿಷ್ಟತೆಗಳನ್ನು ಪ್ರಕಟಿಸುವ ಮೂಲಕ ಗಮನ ಸೆಳೆದಿದೆ. ಗ್ರಾಮೀಣ ಭಾಗದ ಸಮಸ್ಯೆಗಳು, ಪ್ರಾದೇಶಿಕ ವೈಶಿಷ್ಟ್ಯತೆಗಳನ್ನು ನಿರಂತವಾಗಿ ಪಸರಿಸುವ ಜೊತೆಗೆ ಕುಂದಾಪ್ರಕನ್ನಡ ಲೇಖನ ಬರಹಗಳು, ಅಂಕಣ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಜನಮಾಸನದಲ್ಲಿ ನೆಲೆಗೊಂಡಿದೆ.

ಈ ನಿರಂತರ ಸೇವೆಯನ್ನು ಗುರುತಿಸಿ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮೇ.1ರಂದು ನಡೆಯುವ ಉಡುಪಿ ಜಿಲ್ಲಾ ಹದಿನೇಳನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕುಂದಾಪ್ರ ಡಾಟ್ ಕಾಂ ಸಂಸ್ಥೆಯನ್ನು ಗೌರವಿಸಲಾಗುತ್ತದೆ. ಸಂಸ್ಥೆಯ ಪರವಾಗಿ ಸಂಪಾದಕ ಸುನಿಲ್ ಬೈಂದೂರು ಅವರು ಸನ್ಮಾನವನ್ನು ಸ್ವೀಕರಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!