spot_img
Wednesday, April 1, 2026
spot_img

ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದ ಪಾಕಿಸ್ತಾನ | ಸೇನೆಯಿಂದ ಪ್ರತಿಕಾರ

ಜನಪ್ರತಿನಿಧಿ (ಜಮ್ಮು) : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹಳಸಿದ್ದು, ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾ, ಕುಪ್ವಾರ, ಅಖ್ನೂರ್ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 28-29ರ ರಾತ್ರಿ, ಕುಪ್ವಾರ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಹಾಗೂ ಅಖ್ನೂರ್ ವಲಯದಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಪರಿಣಾಮಕಾರಿ ರೀತಿಯಲ್ಲಿ ಪ್ರತಿಕ್ರಿಯಿಸಿದೆ ಎಂದು ಅವರು ಹೇಳಿದ್ದಾರೆ.

ಉಭಯ ರಾಷ್ಟ್ರಗಳ ಸೇನೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯಾವುದೇ ನೋವುಗಳು ವರದಿಯಾಗಿಲ್ಲ.

ಉತ್ತರ ಕಾಶ್ಮೀರದ ಕುಪ್ವಾರಾ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎಲ್‌ಒಸಿ ಉದ್ದಕ್ಕೂ ಹಲವಾರು ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿಯಿಂದ ಪ್ರಾರಂಭಿಸಿದ್ದ ಪಾಕಿಸ್ತಾನವು, ಇದೀಗ ಪೂಂಚ್ ವಲಯ ಮತ್ತು ಅಖ್ನೂರ್‌ನಲ್ಲೂ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!