spot_img
Friday, April 3, 2026
spot_img

ಸರ್ಕಾರ ದಿವಾಳಿಯಾಗಿಲ್ಲ, ಬಿಜೆಪಿ ಶಾಸಕರು ರಾಜಕೀಯ ದಿವಾಳಿಯಾಗಿದ್ದಾರೆ : ವಿಕಾಸ್‌ ಹೆಗ್ಡೆ

ಜನಪ್ರತಿನಿಧಿ (ಉಡುಪಿ) : ಜಿಲ್ಲೆಯ ಬಿಜೆಪಿ ಶಾಸಕರುಗಳು ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿಗಳನ್ನು ಟೀಕಿಸುತ್ತಾ, ಸರ್ಕಾರ ದಿವಾಳಿಯಾಗಿದೆ, ಕ್ಷೇತ್ರಕ್ಕೆ ಅನುದಾನ ಬರುತ್ತಿಲ್ಲಾ ಎನ್ನುವ ಅನಗತ್ಯ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ ವಕ್ತಾರ ವಿಕಾಸ್‌ ಹೆಗ್ಡೆ ಹೇಳಿದ್ದಾರೆ.

ಬಿಜೆಪಿ ಶಾಸಕರ ಆರೋಪವನ್ನು ಅಲ್ಲಗಳೆದ ಅವರು, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನದ ಜೊತೆ ರಾಜ್ಯ ಹೆದ್ದಾರಿಗಳಿಗೆ, ಜಿಲ್ಲಾ ಮುಖ್ಯ ರಸ್ತೆಗಳಿಗೆ ಮರು ಡಾಂಬರಿಕರಣ ಮಾಡಿ ರಸ್ತೆ ಅಗಲಗೋಳಿಸುತ್ತಿರುವ, ಕುಂದಾಪುರ ರಿಂಗ್ ರಸ್ತೆಗೆ ಕಾಂಕ್ರೀಟಿಕರಣ ಮಾಡುತ್ತಿರುವ, ಕುಂದಾಪುರದಲ್ಲಿ ನೂತನ ಪ್ರವಾಸಿ ಮಂದಿರ ನಿರ್ಮಾಣ ಮಾಡುತ್ತಿರುವ, ಲೋಕೋಪಯೋಗಿ ಇಲಾಖೆಯ ಮೂಲಕ ಹಲವಾರು ರಸ್ತೆ ಹಾಗೂ ಸೇತುವೆಗಳನ್ನು ನಿರ್ಮಾಣ ಮಾಡುತ್ತಿರುವ, ಸಣ್ಣ ನೀರಾವರಿ, ಬೃಹತ್ ನೀರಾವರಿ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಗಳ ಅನುದಾನದ ಮೂಲಕ ಹಲವಾರು ಕಾಮಗಾರಿಗಳನ್ನು ನಿರ್ವಹಿಸುತ್ತಿರುವ, ಕೃಷಿ, ತೋಟಗಾರಿಕೆ ಇಲಾಖೆಗಳ ಮೂಲಕ ಕೃಷಿಕರಿಗೆ ಸವಲತ್ತು ನೀಡುತ್ತಿರುವ, ಎಸ್ ಸಿ ಪಿ, ಟಿ ಎಸ್ ಪಿ ಅನುದಾನದಡಿ ಹಲವಾರು ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಲ್ಲದೇ, ಕರ್ನಾಟಕ ರಾಜ್ಯ ಸರ್ಕಾರಕ್ಕೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಕೃತಜ್ಞತೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!