spot_img
Wednesday, April 1, 2026
spot_img

ಮತ್ತೆ ಕದನ ವಿರಾಮ ಉಲ್ಲಂಫಿಸಿದ ಪಾಕ್ | ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನ

ಜನಪ್ರತಿನಿಧಿ  (ಜಮ್ಮು) : ಜಮ್ಮು ಮತ್ತು ಕಾಶ್ಮೀರದ ನಾಲ್ಕು ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಅನೇಕ ವಲಯಗಳಲ್ಲಿ ಪಾಕಿಸ್ತಾನಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿ, ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಇಂದು(ಬುಧವಾರ) ತಿಳಿದುಬಂದಿದೆ.

ಜಮ್ಮುವಿನ ಅಂತರಾಷ್ಟ್ರೀ ಗಡಿ ನಿಯಂತ್ರಣ ರೇಖೆ, ಪರ್ಗ್ವಾಲ್ ವಲಯ ಮತ್ತು ರಾಜೌರಿ ಜಿಲ್ಲೆಯ ಸುಂದರ್‌ಬನಿ ಮತ್ತು ನೌಶೇರಾ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹಳಸಿದ್ದು, ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನದಿಂದ ಸತತ ಆರನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ.

“ಏಪ್ರಿಲ್ 29-30 ರ ರಾತ್ರಿ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿರುವ ನೌಶೇರಾ, ಸುಂದರ್‌ಬನಿ ಮತ್ತು ಅಖ್ನೂರ್ ವಲಯಗಳ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನಿ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿದ್ದು, ಭಾರತೀಯ ಸೇನಾ ಪಡೆಗಳು ತ್ವರಿತವಾಗಿ ದಿಟ್ಟ ಉತ್ತರ ನೀಡಿದೆ ಎಂದು ಜಮ್ಮುವಿನ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಕಾಶ್ಮೀರ ಕಣಿವೆಯ ಬಾರಾಮುಲ್ಲಾ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿನ ಎಲ್‌ಒಸಿಯಾದ್ಯಂತ ಮತ್ತು ಪರ್ಗ್ವಾಲ್ ವಲಯದ ಅಂತರಾಷ್ಟ್ರೀಯ ಗಡಿ ಯುದ್ಧಕ್ಕೂ ಪಾಕಿಸ್ತಾನಿ ಇದೇ ರೀತಿಯ ಅಪ್ರಚೋದಿತ ಗುಂಡಿನ ನಡೆಸಿದೆ ಎಂದು ವರದಿಗಳು ತಿಳಿಸಿವೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!