spot_img
Wednesday, April 1, 2026
spot_img

30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ಯೋಜನೆ : ಪ್ರಿಯಾಂಕ್‌ ಖರ್ಗೆ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಆರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

29 ಜಿಲ್ಲೆಗಳಿಂದ ತಲಾ ಮೂರು ಗ್ರಾಮ ಪಂಚಾಯಿತಿಗಳಂತೆ ಒಟ್ಟು 87, ಬೆಳಗಾವಿ ಜಿಲ್ಲೆಯಲ್ಲಿ 7 ಮತ್ತು ತುಮಕೂರು ಜಿಲ್ಲೆಯ 6 ಗ್ರಾಮ ಪಂಚಾಯಿತಿ ಸೇರಿ ಒಟ್ಟು 100 ಗ್ರಾಮ ಪಂಚಾಯಿತಿಗಳಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರತಿ ಕೇಂದ್ರದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಕೌಶಲ ಅಭಿವೃದ್ಧಿ ನಿಗಮ ಹಾಗೂ ಸರ್ಕಾರೇತರ ಸಂಸ್ಥೆಗಳ ಮೂಲಕ ತರಬೇತಿ ನೀಡಿ, ಬ್ಯಾಂಕುಗಳೊಂದಿಗೆ ಸಂಪರ್ಕ ಏರ್ಪಡಿಸಿ 30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ಆರಂಭಿಸುವಂತೆ ಪ್ರೇರೇಪಿಸಲಾಗುವುದು. ಪ್ರತಿ ತರಬೇತಿ ಕೇಂದ್ರದಿಂದ 300 ಮಹಿಳೆಯರಿಗೆ ಕೌಶಲ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!