spot_img
Monday, March 16, 2026
spot_img

ಪಹಲ್ಗಾಮ್ ದಾಳಿ | ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ʼಸುಪ್ರೀಂʼ ನಕಾರ

ಜನಪ್ರತಿನಿಧಿ (ನವದೆಹಲಿ) : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಅರ್ಜಿಯನ್ನು ಹಿಂಪಡೆಯಲು ಅವಕಾಶ ನೀಡಿದೆ.

ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್)ಸಲ್ಲಿಸಲಾಗಿತ್ತು. ಈ ರೀತಿಯ ಕ್ರಮಗಳು ಸಶಸ್ತ್ರ ಪಡೆಗಳ ಸ್ಥೈರ್ಯ ಕುಗ್ಗಿಸುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

“ಈ ದೇಶದ ಪ್ರತಿಯೊಬ್ಬ ನಾಗರಿಕ ಭಯೋತ್ಪಾದನೆಯ ವಿರುದ್ಧ ಹೋರಾಡಲು ಕೈಜೋಡಿಸಿದ ನಿರ್ಣಾಯಕ ಸಮಯ ಇದು. ಒಬ್ಬ ವ್ಯಕ್ತಿಯ ಸ್ಥೈರ್ಯ ಕುಗ್ಗಿಸುವ ಯಾವುದೇ ಪ್ರಾರ್ಥನೆಯನ್ನು ಮಾಡಬೇಡಿ. ಸಮಸ್ಯೆಯ ಸೂಕ್ಷ್ಮತೆಯನ್ನು ನೋಡಿ” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರ ಪೀಠ ಹೇಳಿದೆ.

“ಜವಾಬ್ದಾರಿಯಿಂದಿರಿ. ನೀವು ದೇಶದೆಡೆಗೆ ಸ್ವಲ್ಪ ಕರ್ತವ್ಯ ಪ್ರಜ್ಞೆ ಹೊಂದಿರಬೇಕು. ಇದುವೇ ದಾರಿ, ದಯವಿಟ್ಟು ಪಿಐಎಲ್ ಸಲ್ಲಿಸಬೇಡಿ. ನಿವೃತ್ತ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಯಾವಾಗಿನಿಂದ ಇಂತಹ ವಿಷಯಗಳನ್ನು (ಭಯೋತ್ಪಾದನೆ) ತನಿಖೆ ಮಾಡಲು ಪರಿಣಿತರಾದರು? ನಾವು ಏನನ್ನೂ ಸ್ವೀಕರಿಸುತ್ತಿಲ್ಲ. ದಯವಿಟ್ಟು ನೀವು ಎಲ್ಲಿಗೆ ಹೋಗಬೇಕೆಂದರೂ ಹೋಗಿ” ಎಂದು ಪೀಠ ಹೇಳಿದೆ.

ಅರ್ಜಿದಾರರಾದ ಫತೇಶ್ ಕುಮಾರ್ ಸಾಹು ಅವರಿಗೆ ವೈಯಕ್ತಿಕವಾಗಿ ಅರ್ಜಿಯನ್ನು ಹಿಂಪಡೆಯಲು ಕೋರ್ಟ್ ಇದೇ ವೇಳೆ ಅವಕಾಶ ನೀಡಿತು.

ಜಮ್ಮು ಮತ್ತು ಕಾಶ್ಮೀರದ ಮೂವರು ನಿವಾಸಿಗಳು ಸಲ್ಲಿಸಿದ ಅರ್ಜಿಯು, ಭಯೋತ್ಪಾದಕ ದಾಳಿಯ ಬಗ್ಗೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸುಪ್ರೀಂ ಕೋರ್ಟ್ ನ್ನು ಕೋರಿತ್ತು.

ಅರ್ಜಿದಾರರಾದ ಫತೇಶ್ ಕುಮಾರ್ ಶಾಹು, ಮೊಹಮ್ಮದ್ ಜುನೈದ್ ಮತ್ತು ವಿಕ್ಕಿ ಕುಮಾರ್, ಕೇಂದ್ರಾಡಳಿತ ಪ್ರದೇಶದ ಪ್ರವಾಸಿ ಪ್ರದೇಶಗಳಲ್ಲಿ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗೆ ನಿರ್ದೇಶನ ನೀಡಬೇಕೆಂದು ಕೋರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!