spot_img
Monday, February 16, 2026
spot_img

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಸಬೇಕೆಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಒತ್ತಾಯ

ಜನಪ್ರತಿನಿಧಿ (ಬೆಂಗಳೂರು) : ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಇಂದು ಸಿಎಂ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯೂ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು  ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎನ್ನುವುದು ನನ್ನ ಒತ್ತಾಯ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸುವಂತೆ ಅವರು ಹಿಂದಿನಿಂದಲೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ.

ಈ ರೀತಿ 2015 ರಲ್ಲಿಯೇ ನಮ್ಮ ಸರ್ಕಾರ ಶಾಶ್ವತ  ಹಿಂದುಳಿದ ವರ್ಗಗಳ ಆಯೋಗದ ಮೂಲಕ 192 ಕೋಟಿ ವೆಚ್ಚ ಮಾಡಿ 1. 33 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸಿದೆ. ಇದರಿಂದ ಪ್ರೇರಿತವಾಗಿ ಮತ್ತು ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಈಗ ಸಮೀಕ್ಷೆಗೆ ಮುಂದಾಗಿದೆ ಎಂದರು.

ಪ್ರಸಕ್ತ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ವರದಿಯನ್ನು ಮೇ 9 ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಮೀಸಲಾತಿ ಏರಿಕೆಯಾಗಬೇಕಾದರೆ ಸಂವಿಧಾನಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಎಷ್ಟು ಪ್ರಮಾಣದಲ್ಲಿ ಏರಿಕೆ ಮಾಡಬೇಕೆಂದು ತಿಳಿಸಬಹುದು. ಆಗ ಸಂವಿಧಾನ ತಿದ್ದುಪಡಿ ಮಾಡಿ ಏರಿಕೆ ಮಾಡಬಹುದು ಎಂದು ಅವರು ಹೇಳಿದರು.

ಮುಂದಿನ ಸಚಿವ ಸಂಪುಟದಲ್ಲಿ ಅಭಿಪ್ರಾಯ ಪಡೆದು ಚರ್ಚೆ ಮಾಡಿ, ನಮ್ಮ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಬಜೆಟ್ ರೂಪಿಸುವಾಗ ಇದನ್ನು ಆಧಾರವಾಗಿಟ್ಟುಕೊಂಡು ಅನುದಾನ ಹಂಚಿಕೆ ಮಾಡಲಾಗುವುದು. 50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕೇವಲ ಜಾತಿಗಣತಿಯ ಘೋಷಣೆ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. 73-74 ರ ತಿದ್ದುಪಡಿಗಳನ್ನು ಬಿಜೆಪಿ ವಿರೋಧಿಸಿತ್ತು. ಇತಿಹಾಸ ನೋಡಿದರೆ ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ ಎಂಬುದರ ಅರಿವಾಗುತ್ತದೆ. ಕೂಡಲೇ ಯಾವ ದಿನಾಂಕದಿಂದ ಜನಗಣತಿ, ಜಾತಿ ಗಣತಿ ಮಾಡುತ್ತಾರೆ ಎಂದು ತಿಳಿಸಬೇಕು. ಜಾತಿ ಗಣತಿ ಮಾಡುವಾಗ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕೂಡ ಆಗಬೇಕು. ಇಲ್ಲಿಯವರೆಗೂ ಇದನ್ನು ವಿರೋಧಿಸುತ್ತಿದ್ದವರು ಈಗ ಸಮೀಕ್ಷೆ ನಡೆಸುವ ಘೋಷಣೆ ಮಾಡಿದ್ದಾರೆ. ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದಾಗ ಕೇಂದ್ರ ಸರ್ಕಾರ ಅದನ್ನು ವಿರೋಧಿಸಿ, ಟೀಕಿಸಿತ್ತು. ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ಅವರೂ ಅಳವಡಿಸಿಕೊಳ್ಳುತ್ತಿದ್ದಾರೆ. ಜಾತಿ ಗಣತಿ ವಿಚಾರದಲ್ಲಿ ಕೂಡ ಹಾಗೆಯೇ ಮಾಡಿದ್ದಾರೆ.

ರಾಜ್ಯ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ 5.90 ಕೋಟಿ ಜನರನ್ನು ಒಳಪಡಿಸಲಾಗಿದೆ. ಶೇ 93% ಜನಸಂಖ್ಯೆ ಸಮೀಕ್ಷೆಗೆ ಒಳಪಟ್ಟಿದ್ದು, 100% ಸಮೀಕ್ಷೆ ನಡೆಸಲು ಯಾವ ಸರ್ಕಾರಗಳಿಂದಲೂ ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಪುಟ್ಟರಂಗಶೆಟ್ಟಿ ಅವರು ಹಿಂದುಳಿದ ವರ್ಗಗಳ ಸಚಿವರಾಗಿದ್ದಾಗ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ವರದಿ ಪಡೆಯಲು ದಿನಾಂಕ ನಿಗದಿ ಮಾಡಿದಾಗ ಅವರನ್ನು ಅಮಾನತು ಮಾಡುವುದಾಗಿ ಹೆದರಿಸಿದ್ದ ಕುಮಾರಸ್ವಾಮಿ ಅವರು, ಕೊನೆಗೂ ವರದಿಯನ್ನು ಪಡೆಯಲಿಲ್ಲ. ಈಗ ನೋಡಿದರೆ ಕೇಂದ್ರದ ನಿರ್ಧಾರವನ್ನು ಹೊಗಳುತ್ತಿದ್ದಾರೆ. ಇದೆಂಥಾ ಇಬ್ಬದಿತನ? ಎಂದು ಪ್ರಶ್ನಿಸಿದ್ದಲ್ಲದೇ, ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಸಮೀಕ್ಷೆಯ ವರದಿಯನ್ನು ಪಡೆಯಲಿಲ್ಲ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ದೊರಕಿಸಲು, ಸಮಾನತೆ ತರಲು ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ, ಸಾಮಾಜಿಕವಾಗಿ ಪಾಲಿರಬೇಕು ಎಂಬ ಉದ್ದೇಶದಿಂದ ಸಮೀಕ್ಷೆ ನಡೆಸಲಾಗಿತ್ತು ಎಂದು ಅವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!