spot_img
Thursday, April 2, 2026
spot_img

ಸುಹಾಸ್ ಶೆಟ್ಟಿ ಹ*ತ್ಯೆ ಹಿನ್ನೆಲೆ: ಮಂಗಳೂರು ಉದ್ವಿಗ್ನ

ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ಗುರುವಾರ ರಾತ್ರಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ರಾಜ್ಯ ಗೃಹ ಇಲಾಖೆ ಪೊಲೀಸ್ ಇಲಾಖೆಗೆ ಸೂಚಿಸಿದೆ.

ಗುರುವಾರ ರಾತ್ರಿ 8.30ಕ್ಕೆ ಮಂಗಳೂರು ಬಜಪೆಯತ್ತ ಇನ್ನೋವಾ ಕಾರಿನಲ್ಲಿ ಸಾಗುತ್ತಿದ್ದ ರೌಡಿ ಶೀಟರ್, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಮತ್ತು ಸ್ನೇಹಿತರಿದ್ದ ಕಾರನ್ನು ಬೆನ್ನಟ್ಟಿ ಬಂದ ಐದಾರು ಮಂದಿಯ ಹಂತಕರ ತಂಡ ಕಿನ್ನಿಪದವಿನಲ್ಲಿ ಮತ್ತೊಂದು ಪಿಕಪ್ ವಾಹನದ ಮೂಲಕ ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಕಾರಿನಿಂದ ಕೆಳಗೆ ಇಳಿಯುವಾಗ ತಲವಾರಿನಿಂದ ಕಡಿದು ಪರಾರಿಯಾಗಿತ್ತು. ತಕ್ಷಣ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುಹಾಸ್ ಶೆಟ್ಟಿಯನ್ನು ಆಸ್ಪತ್ರೆಗೆ ಕರೆತರುವುದರೊಳಗೆ ಅವರು ಅಸುನೀಗಿದ್ದರು.
ಸುಹಾಸ್ ಶೆಟ್ಟಿ 2022ರಲ್ಲಿ ಸುರತ್ಕಲ್‌ನಲ್ಲಿ ನಡೆದೆ ಹತ್ಯೆಯಾಗಿದ್ದ ಫಾಜಿಲ್ ಪ್ರಕರಣದ ಆರು ಆರೋಪಿಗಳಲ್ಲಿ ಒಬ್ಬರಾಗಿದ್ದು, 2024ರಲ್ಲಿ ಅವರಿಗೆ ಜಾಮೀನು ಸಿಕ್ಕಿತ್ತು. ಫಾಜಲ್ ಹತ್ಯೆಯ ಪ್ರತಿಕಾರವಾಗಿ ಈ ಹತ್ಯೆ ನಡೆದಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿದೆ.
ಜನನಿಬಿಡ ಪ್ರದೇಶದಲ್ಲಿ ಹಂತಕರು ರಾಜಾರೋಷವಾಗಿ ಹತ್ಯೆ ನಡೆಸಿರುವುದು ಸಿಸಿಕ್ಯಾಮರಗಳಲ್ಲಿ ದಾಖಲಾಗಿದೆ. ಭಯ ಭೀತಿಯ ವಾತಾವರಣ ಮಂಗಳೂರಲ್ಲಿ ನಿರ್ಮಾಣವಾಗಿದೆ. ಘಟನೆಯನ್ನು ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!