spot_img
Thursday, April 2, 2026
spot_img

ಎಸ್.ಎಸ್.ಎಲ್.ಸಿ: ಕುಂದಾಪುರದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾವ್ಯ ಪಿ ಶೆಟ್ಟಿ ರಾಜ್ಯಕ್ಕೆ ತೃತೀಯ

ಜನಪ್ರತಿನಿಧಿ ವಾರ್ತೆ] ಕುಂದಾಪುರದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ಪಿ.ಶೆಟ್ಟಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದಾರೆ.

ಸಂತೋಷಗೊಂಡಿರುವ ಪ್ರಾವ್ಯ ಪಿ. ಶೆಟ್ಟಿ “ತನ್ನ ಈ ಉತ್ಕೃಷ್ಟವಾದ ಫಲಿತಾಂಶವನ್ನು ನಾನು ಮೊದಲೇ ನಿರೀಕ್ಷಿಸಿದ್ದೆ. ತನ್ನ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ. ಶಾಲೆಯಲ್ಲಿನ ಅತ್ಯುತ್ತಮವಾದ ಬೋಧನೆ, ನಿರಂತರವಾಗಿ ನಡೆಸುತ್ತಿದ್ದ ಪೂರ್ವ ತಯಾರಿ ಪರೀಕ್ಷೆಗಳು, ಪರೀಕ್ಷಾ ಸಮಯದಲ್ಲಿ ಶಾಲೆಯಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಗಾರಗಳು, ಸಹಪಠ್ಯ ಚಟುವಟಿಕೆಗಳು ತುಂಬಾ ಸಹಾಯವಾಗಿದ್ದು ಉತ್ತಮ ಸಾಧನೆಗೆ ಸಹಾಯವಾಯಿತು. ನಾನು ಹಾಸ್ಟೆಲ್ ನ ವಿದ್ಯಾರ್ಥಿನಿಯಾಗಿದ್ದು ಹಾಸ್ಟೆಲ್ ನ ಸ್ಟಡಿ ಅವರ್ಸ್, ಹಾಸ್ಟೆಲ್ ಶಿಕ್ಷಕರು, ಹಾಸ್ಟೆಲ್ ವಾರ್ಡನ್ ಎಲ್ಲರ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು. ವಿಶೇಷವಾಗಿ ನಮ್ಮ ಶಾಲೆಯಲ್ಲಿ ಆರನೇ ತರಗತಿಯಿಂದಲೇ ಬೋಧಿಸುತ್ತಿರುವ ಐ‌ಐಟಿ/ನೀಟ್ ಫೌಂಡೇಶನ್ ಕೋರ್ಸ್ ನ ಮಾಸಿಕ ಪರೀಕ್ಷೆಗಳು ಜಟಿಲವಾದ ಪ್ರಶ್ನೆಗಳನ್ನು ಸರಳವಾಗಿ ಉತ್ತರಿಸಲು ನೆರವಾಯಿತು. ಮುಂದೆ ವೈದ್ಯೆಯಾಗಿ ಜನರ ಸೇವೆ ಮಾಡುವ ಆಸೆ ಇದೆ. ಪಿಯುಸಿ ಶಿಕ್ಷಣವನ್ನು ನಮ್ಮದೇ ಸುಜ್ಞಾನ ಪಿಯು ಕಾಲೇಜಿನಲ್ಲಿ ಮುಂದುವರಿಸುತ್ತೇನೆ ಎಂದರು.

ಪ್ರಾವ್ಯ ಪಿ ಶೆಟ್ಟಿ ಅವರ ಸಾಧನೆಯನ್ನು ಅಭಿನಂದಿಸುತ್ತ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ. ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ದವರ ಪ್ರಯತ್ನವನ್ನು ಶ್ಲಾಘಿಸುತ್ತಾ , ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಗೈದ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಮತ್ತು ಖಜಾಂಚಿ ಭರತ್ ಶೆಟ್ಟಿ ಅವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!