spot_img
Wednesday, April 1, 2026
spot_img

ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ : ಡಿಸಿಎಂ ಡಿ.ಕೆ. ಶಿವಕುಮಾರ್

ಜನಪ್ರತಿನಿಧಿ (ಬೆಂಗಳೂರು) : “ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (IIFA) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸಂಬಂಧ IIFA ಪ್ರತಿನಿಧಿಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ ಹಾಗೂ ಐಫಾ ಪ್ರಶಸ್ತಿ ವಿತರಣೆ ಸಮಾರಂಭ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಐಫಾದವರ ಜತೆ ಚರ್ಚೆ ನಡೆಸಲಾಯಿತು. ಒಂದಷ್ಟು ಕಾರ್ಯಕ್ರಮಗಳನ್ನು ಸಂಯೋಜಿಸಿ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಉತ್ತಮ ವಾತಾವರಣ ಸೃಷ್ಟಿ ಮಾಡುವುದು ನಮ್ಮ ಆಧ್ಯತೆ. ಜೊತೆಗೆ ಬೆಂಗಳೂರಿನ ಬಗ್ಗೆ ಮಹತ್ವ ನೀಡಬೇಕು ಎನ್ನುವುದು ನಮ್ಮ ಆಲೋಚನೆ” ಎಂದರು.

“ಈ ಹಿಂದೆ ರಾಜಸ್ಥಾನದಲ್ಲಿ ನಡೆದಿತ್ತು. ತೆಲಂಗಾಣದಲ್ಲಿ ಸೌಂದರ್ಯ ಸ್ಪರ್ಧೆ ಮಾಡುತ್ತಿದ್ದಾರೆ. ನಾವು ಇದನ್ನು ಮಾಡಲು ಹೋಗುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಗಿಂತ ನಮ್ಮ ಸ್ಯಾಂಡಲ್ ವುಡ್ ಎತ್ತರಕ್ಕೆ ಹೋಗಿದೆ. ಇದಕ್ಕೆ ಉತ್ತೇಜನ ಕೊಡಬೇಕು ಎಂಬುದು ನಮ್ಮ ಉದ್ದೇಶ. ಅಕ್ಟೋಬರ್ ನಲ್ಲಿ ದಸರಾವಿರುವ ಕಾರಣಕ್ಕೆ ಡಿಸೆಂಬರ್, ಜನವರಿಯಲ್ಲಿ ನಡೆಸಬಹುದು ಎಂದು ತಿಳಿಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಪರಿಚಯಿಸಲು ಅವಕಾಶ ಸಿಗಲಿದೆ. ಮುಂಬೈ ಬಿಟ್ಟರೆ ಬೆಂಗಳೂರು ಈ ರೀತಿಯ ಕಾರ್ಯಕ್ರಮಗಳಿಗೆ ಸೂಕ್ತ ಎಂದು ಆಯೋಜಕರು ತಿಳಿಸಿದ್ದಾರೆ” ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!