spot_img
Wednesday, April 1, 2026
spot_img

ಸುಹಾಸ್‌ ಶೆಟ್ಟಿ ಕೊ*ಲೆ : ಮೇ 5ರವರೆಗೆ ನಿಷೇಧಾಜ್ಞೆ | ಇಬ್ಬರು ಹಿಂದೂ ಯುವಕರು ಸೇರಿ 8 ಆರೋಪಿಗಳ ವಿಚಾರಣೆ | ಇಂದು ಗೃಹ ಸಚಿವರ ಭೇಟಿ !?

ಜನಪ್ರತಿನಿಧಿ (ಮಂಗಳೂರು) : ಹಿಂದೂ ಸಂಘಟನೆ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾರಿಗೆ ತಂದಿರುವ ನಿಷೇಧಾಜ್ಞೆಯನ್ನು ಮೇ 5ರವರೆಗೆ ಮುಂದೂಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇದೇ 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಆದೇಶ ಹೊರಡಿಸಿದ್ದಾರೆ. ಪ್ರಕ್ಷುಬ್ಧ ಸ್ಥಿತಿಯಲ್ಲಿದ್ದ ಮಂಗಳೂರು ಇಂದು ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಇಂದು ಬೆಳಗ್ಗೆಯಿಂದ ಬಸ್, ಆಟೋರಿಕ್ಷಾ ಸಂಚಾರ ಆರಂಭವಾಗಿದೆ.

ಮೊನ್ನೆ ಗುರುವಾರ ರಾತ್ರಿ ಸುಹಾಶ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

8 ಆರೋಪಿಗಳು ಬಲೆಗೆ

ಸುಹಾಸ್ ಶೆಟ್ಟಿ ಕೊಲೆ ಕೇಸ್‌ ಸಂಬಂಧ ಇಬ್ಬರು ಹಿಂದೂ ಯುವಕರನ್ನು ಒಳಗೊಂಡು ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ.

ಇಂದು ಗೃಹ ಸಚಿವ ಪರಮೇಶ್ವರ್ ಭೇಟಿ

ಪ್ರಕ್ಷುಬ್ಧ ಸ್ಥಿತಿಯಲ್ಲಿರುವ ಮಂಗಳೂರಿಗೆ ಇಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಭೇಟಿ ನೀಡಲಿದ್ದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಬಗ್ಗೆ ಮಾಧ್ಯಮಗಳ ಮುಂದೆ ಸಂಪೂರ್ಣ ಮಾಹಿತಿ ನೀಡುವ ಸಾಧ್ಯತೆಯಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!