spot_img
Sunday, February 15, 2026
spot_img

ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಮೇಲಿವೆ ಎರಡು ಕೊ*ಲೆ ಸೇರಿ ಹಲವು ಪ್ರಕರಣಗಳು !

ಜನಪ್ರತಿನಿಧಿ (ಮಂಗಳೂರು) : ಮೊನ್ನೆ (ಗುರುವಾರ) ರಾತ್ರಿ ದುಷ್ಕರ್ಮಿಗಳಿಂದ ಕೊಲೆಯಾದ ರೌಡಿ ಶೀಟರ್ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ, ದಲಿತ ದೌರ್ಜನ್ಯ ಸೇರಿ ಹಲವು ಪ್ರಕರಣಗಳು ಎಂದು ಈ ಹಿಂದೆ ಆತನ ಮೇಲಿನ ದಾಖಲಾಗಿದ್ದ ಎಫ್‌ಐಎರ್‌ ವಿವರಗಳು ಹೇಳುತ್ತವೆ.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಎಕ್ಕಾರು ಗ್ರಾಮದ ದೇವರ ಗುಡ್ಡೆ ಎಂಬಲ್ಲಿ 20 ವರ್ಷದ ಯುವಕ ಕೀರ್ತಿ ಎಂಬವರನ್ನು 2020ರಲ್ಲಿ ಕೊಲೆ ಮಾಡಲಾಗಿತ್ತು. ಇದರಲ್ಲಿ ಸುಹಾಸ್‌ ಶೆಟ್ಟಿ ಎರಡನೇ ಆರೋಪಿಯಾಗಿದ್ದನು. ಆನಂತರದಲ್ಲಿ ದೀಪೇಶ್‌, ಸುಹಾಸ್, ಗೌತಮ್, ಉಮಾನಾಥ, ಪ್ರಶಾಂತ್ ಮತ್ತು ಇತರರ ವಿರುದ್ಧ ಬಟ್ಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 148, 323, 324, 504, 506, 307, 302, 149 ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸುಹಾಸ್ ಶೆಟ್ಟಿ 2022ರಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್‌ನಲ್ಲಿ ನಡೆದ ಕೃಷ್ಣಾಪುರ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಜನನಿಬಿಡ ಸುರತ್ಕಲ್ ಪೇಟೆಯಲ್ಲಿದ್ದ ಫಾಝಿಲ್‌ನನ್ನು ರಾತ್ರಿ 8:30ರ ಸುಮಾರಿಗೆ ಸುಹಾಸ್ ಶೆಟ್ಟಿ ತಂಡ ತಲವಾರು ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಪ್ರಕರಣ ಇನ್ನೂ ವಿಚಾರಣಾ ಹಂತದಲ್ಲಿದೆ.

ಬಂಟ್ವಾಳ ತಾಲೂಕಿನ ಕಾರಿಂಜೆ ನಿವಾಸಿಯಾದ ಸುಹಾಸ್‌ ಶೆಟ್ಟಿ ಎರಡು ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿ ಶೀಟರ್ ಎಂದು ಪೊಲೀಸ್ ಕಮಿಷನ‌ರ್ ಮಾಹಿತಿ ನೀಡಿದ್ದಾರೆ.

ಸುಹಾಸ್‌ ಶೆಟ್ಟಿ ಮೇಲಿರುವ ಪ್ರಕರಣಗಳ ವಿವರ:

1) ಬಟ್ಟೆ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಐಪಿಸಿ ಸೆಕ್ಷನ್ 143, 47, 323, 447, 504, 506, 149ರ‌ ಅಡಿ ದಾಖಲಾಗಿದ್ದು ಪ್ರರಣದಲ್ಲಿ ಆತ ಖುಲಾಸೆಯಾಗಿದ್ದಾನೆ.

2) ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಐಪಿಸಿ 160ರಡಿ ದಾಖಲಾದ ಪ್ರಕರಣದಲ್ಲಿ ಆತನಿಗೆ ಶಿಕ್ಷೆಯಾಗಿದೆ.

3) ಬಜ್ಜೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಐಪಿಸಿ 143, 147, 148, 323, 324, 504, 506ರಡಿ ದಾಖಲಾದ ಪ್ರಕರಣದಲ್ಲಿ ಆತ ಖುಲಾಸೆಯಾಗಿದ್ದಾನೆ.

4) ಬಜ್ಪೆ ಪೊಲೀಸ್ ಠಾಣೆಯಲ್ಲಿ  2020ರಲ್ಲಿ 143, 147, 148, 323, 324, 504, 506, 307, 302, 149ರ ಅಡಿ ಮತ್ತು ಜಾತಿ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣವು ಈಗಾಗಲೇ ವಿಚಾರಣಾ ಹಂತದಲ್ಲಿದೆ.

5) 2022ರಲ್ಲಿ ಸುರತ್ಕಲ್ ಠಾಣೆಯಲ್ಲಿ ಐಪಿಸಿ 143, 147, 148, 326, 302, 504, 506, 120(B) 201, 202, 204, 212, 118, 149ರಡಿ ದಾಖಲಾದ ಫಾಝಿಲ್ ಕೊಲೆ ಪ್ರಕರಣವು ವಿಚಾರಣಾ ಹಂತದಲ್ಲಿದೆ.

ದಲಿತ ಯುವಕ ಕೀರ್ತಿ ಮತ್ತು ಮುಸ್ಲಿಂ ಯುವಕ ಫಾಝಿಲ್ ಕೊಲೆ ಸಹಿತ ಹಲವು ಪ್ರಕರಣಗಳ ಆರೋಪಿಯಾಗಿದ್ದ ಸುಹಾಸ್‌ ಶೆಟ್ಟಿ ಹತ್ಯೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ಹಿಂದುತ್ವ ಸಂಘಟನೆಗಳು ಕರೆ ನೀಡಿವೆ. ಬಿಜೆಪಿ ನಾಯಕರು ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!