spot_img
Monday, March 16, 2026
spot_img

ಸುಹಾಸ್‌ ಶೆಟ್ಟಿ ಕೊ*ಲೆಗೂ ಮುನ್ನಾ ಆರೋಪಿಗಳಿಂದ ಚಿಕ್ಕಮಗಳೂರಿನಲ್ಲಿ ನಡೆದಿತ್ತೇ ನೈಟ್‌ ಪಾರ್ಟಿ !? : ಫೋಟೋ ವೈರಲ್‌

ಜನಪ್ರತಿನಿಧಿ (ಮಂಗಳೂರು) : ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿರುವ ಫೋಟೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದ್ದು, ವರದಿ ಹೇಳುವ ಪ್ರಕಾರ, ಚಿಕ್ಕಮಗಳೂರಿನ ಕಳಸದಲ್ಲಿರುವ ಖಾಸಗಿ ರೆಸಾರ್ಟ್ ಒಂದರಲ್ಲಿ ಏಪ್ರಿಲ್ 2 ರಂದು ಆರೋಪಿಗಳು ರಾತ್ರಿ ಇಡೀ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲೆಂದೇ ಈ ಪಾರ್ಟಿ ಮಾಡಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ವರದಿಗಳು ಹೇಳಿವೆ.

ಕ್ಯಾಂಪ್ ಫೈರ್ ಹಾಕಿ ಸುಹಾಸ್‌ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಪಾರ್ಟಿ ಮಾಡಿದ್ದಾರೆ. ಈ ಮೂವರ ಜೊತೆ ಇನ್ನೂ ಐದು ಜನ ಅಪರಿಚಿತರು ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

ಈ ಪಾರ್ಟಿಯಲ್ಲಿ ರಂಜಿತ್‌ನನ್ನು ಮುಝಮ್ಮಿಲ್‌ಗೆ ನಿಯಾಜ್‌ ಪರಿಚಯ ಮಾಡಿಕೊಟ್ಟಿದ್ದ. ಈ ಪಾರ್ಟಿಯಲ್ಲೇ ರೌಡಿ ಶೀಟರ್ ಸುಹಾಸ್ ಹತ್ಯೆ ಬಗ್ಗೆ ಮಾತುಕತೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸುಹಾಸ್ ಶೆಟ್ಟಿ ಹತ್ಯೆಗೆ ಫಾಝಿಲ್‌ ಸಹೋದರ ಆದಿಲ್‌ 5 ಲಕ್ಷ ರೂ. ಸುಪಾರಿ ನೀಡಿದ್ದ. ಈ ಹಣದ ಪೈಕಿ 3 ಲಕ್ಷ ರೂ.ಹಣವನ್ನು ಮುಂಗಡವಾಗಿ ಪಾವತಿಸಲಾಗಿತ್ತು. ಈ ಹಣದಲ್ಲೇ ಪಾರ್ಟಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಮಂಗಳೂರಿನ ಮೊಹಮ್ಮದ್ ಮುಝಮ್ಮಿಲ್‌ 4 ತಿಂಗಳ ಹಿಂದೆ ಸೌದಿ ಅರೇಬಿಯಾದಿಂದ ಬಂದಿದ್ದು ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಮೇಸ್ತ್ರಿ ಕೆಲಸ ಮಾಡುತ್ತಿರುವ ನಿಯಾಜ್ ಬಜ್ಪೆ ಶಾಂತಿಗುಡ್ಡೆ ಮಸೀದಿ ಬಳಿ ನೆಲೆಸಿದ್ದ. ಕಳಸ ತಾಲೂಕಿನ ರುದ್ರ ಪಾದದ ರಂಜಿತ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಸುಹಾಸ್ ಮೇಲೆ ದಾಳಿ ಮಾಡಲು ಈತನೇ ಲಾಂಗ್ ತಂದುಕೊಟ್ಟ ಆರೋಪವೂ ಈಗ ಕೇಳಿ ಬಂದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!