spot_img
Wednesday, April 1, 2026
spot_img

ಗಂಗೊಳ್ಳಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್: ಸುಶ್ಮಿತಾ ಎಸ್.ಗಾಣಿಗ ಅವರಿಗೆ ಸನ್ಮಾನ

ಗಂಗೊಳ್ಳಿ : 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 2ನೇ ರ್‍ಯಾಂಕ್ ಪಡೆದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್.ಗಾಣಿಗ ಅವರನ್ನು ಗಂಗೊಳ್ಳಿಯ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸುಶ್ಮಿತಾ ಎಸ್.ಗಾಣಿಗ ಸಾಧನೆಯನ್ನು ಪ್ರಶಂಶಿಸಿ, ಅಭಿನಂದಿಸಿ ಮಾತನಾಡಿದ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್, ರಾಜ್ಯ ಮಟ್ಟದಲ್ಲಿ ರ್‍ಯಾಂಕ್ ಪಡೆಯುವುದು ಅಷ್ಟು ಸುಲಭವಲ್ಲ. ರಾಜ್ಯದಲ್ಲೇ ಪ್ರಸಿದ್ಧಿಯಾಗಿರುವ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಚಿನ್ನದ ಗರಿಯನ್ನು ಸೇರ್ಪಡೆ ಮಾಡಿರುವ ಸುಶ್ಮಿತಾ ಅವರ ಸಾಧನೆ ಪ್ರಶಂಸನೀಯ ಎಂದರು.

ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಸಂಚಾಲಕ ಎನ್.ಸದಾಶಿವ ನಾಯಕ್, ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಜಿ.ಗೋವಿಂದ್ರಾಯ ಆಚಾರ್ಯ, ಕೆ.ರಾಮನಾಥ ನಾಯಕ್, ಎನ್.ಅಶ್ವಿನ್ ನಾಯಕ್, ಎಂ.ನಾಗೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಸಹಶಿಕ್ಷಕಿ ಸುಜಾತ, ಗಂಗೊಳ್ಳಿ ಗ್ರಾಪಂ ಸದಸ್ಯೆ ಮಮತಾ ಎಸ್.ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!