spot_img
Wednesday, April 1, 2026
spot_img

ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಇ-ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಕರ್ತವ್ಯದಲ್ಲಿ ಮುಂದುವರಿಕೆ: ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮನವಿಗೆ ಸ್ಪಂದನೆ

ಕುಂದಾಪುರ: ಮೇ 6: ಇಡೀ ರಾಜ್ಯದಲ್ಲಿ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳನ್ನು ಕಡಿತಗೊಳಿಸುತ್ತಿರುವ ವಿಚಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ, ಕುಂದಾಪುರ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದ 5 ಜನ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಸುವ ಬಗ್ಗೆ ಮನವಿ ಸಲ್ಲಿಸಿದ್ದರು.

ಇದಕ್ಕೆ ಪೂರಕವಾಗಿ ಸ್ಪಂದನೆ ನೀಡಿದ ಸಚಿವರು ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯಾವುದೇ ಸಿಬ್ಬಂದಿಯನ್ನು ಕಡಿತಗೊಳಿಸಿದಂತೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಅದರಂತೆ ಎಲ್ಲಾ ಸಿಬ್ಬಂದಿಗಳು ತಮ್ಮ ಕರ್ತವ್ಯದಲ್ಲಿ ಮುಂದುವರೆಯಲು ಅವಕಾಶವನ್ನು ಕಲ್ಪಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!