spot_img
Tuesday, March 31, 2026
spot_img

KPSC ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು, ಅವ್ಯವಸ್ಥೆಯ ಭ್ರಷ್ಟಕೂಪವಾಗಿದೆ : ವಿಜಯೇಂದ್ರ ಆರೋಪ

ಜನಪ್ರತಿನಿಧಿ (ಬೆಂಗಳೂರು) : ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.

ಈ ಸಂಬಂಧಿಸಿದಂತೆ ತಮ್ಮ ಅಧಿಕೃತ ಎಕ್ಸ್ ಖಾತೆಯ ಮೂಲಕ ಸರ್ಕಾರ ವಿರುದ್ದ ಹರಿಹಾಯ್ದ ಅವರು, KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ. ಇದೀಗ ಮತ್ತೊಂದು ಪ್ರಮಾದವೆಸಗಿ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಜತೆ ಚೆಲ್ಲಾಟವಾಡಿ ಸಾರ್ವಜನಿಕ ವಲಯದಲ್ಲೂ ಆಕ್ರೋಶಕ್ಕೆ ಗುರಿಯಾಗಿದೆ.

ಸೋಮವಾರ ನಡೆದ ಪರೀಕ್ಷೆಯಲ್ಲಿ ಬೆಂಗಳೂರಿನ ಕೇಂದ್ರವೊಂದರಲ್ಲಿ ಸೀಲ್ ತೆರೆದಿದ್ದ ಪ್ರಶ್ನೆಪತ್ರಿಕೆಯ ಬಂಡಲ್ ಪತ್ತೆಯಾಗಿದ್ದು, ಇದನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರೂ ಸಹ ಒಪ್ಪಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಅನುಮಾನ ಹುಟ್ಟುಹಾಕಿದೆ. ಕರ್ನಾಟಕ ಲೋಕಸೇವಾ ಆಯೋಗವು ಪದೇ ಪದೇ ಎಡವಟ್ಟುಗಳು, ಗೊಂದಲಗಳನ್ನು ಸೃಷ್ಟಿಸಿ ದೇಶದೆದುರು ಕರ್ನಾಟಕದ ಘನತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಣುಮುಚ್ಚಿ ಕುಳಿತಿರುವುದು ದುರಂತದ ದೌರ್ಭಾಗ್ಯವೇ ಸರಿ ಎಂದಿದ್ದಾರೆ.

ಈ ಕೂಡಲೇ ಪರೀಕ್ಷಾ ಕೊಠಡಿಗೆ ಪ್ರಶ್ನೆಪತ್ರಿಕೆಗಳು ಬರುವ ಮುನ್ನವೇ ಬಂಡಲ್ ತೆರೆದಿರುವ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಕೆಪಿಎಸ್ಸಿ ಪರೀಕ್ಷಾ ಅಭ್ಯರ್ಥಿಗಳಿಗಾಗುತ್ತಿರುವ ಬಹುದೊಡ್ಡ ಅನ್ಯಾಯ, ದ್ರೋಹಗಳನ್ನು ಸರಿಪಡಿಸದಿದ್ದರೆ ಲಕ್ಷಾಂತರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆ ತೆರಬೇಕಾದೀತು ಎಂದು ಎಚ್ಚರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

https://x.com/BYVijayendra/status/1919626718043898097

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!