spot_img
Wednesday, April 1, 2026
spot_img

ʼಆಪರೇಷನ್ ಸಿಂಧೂರ್ʼ : ಪಾಕಿಸ್ತಾನದ ಒಂಬತ್ತು ಉಗ್ರ ನೆಲೆಗಳ ಮೇಲೆ ಭಾರತದ ಪ್ರತಿಕಾರದ ದಾಳಿ

ಜನಪ್ರತಿನಿಧಿ (ನವದೆಹಲಿ) : ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಇಂದು(ಬುಧವಾರ) ನಸುಕಿನ ಜಾವ ಭಾರತ ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆ ನಡೆಸಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.

ಒಟ್ಟು ಒಂಬತ್ತು ತಾಣಗಳ ಮೇಲೆ ದಾಳಿ ಮಾಡಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ “ನಿಖರ ದಾಳಿ”ಗಳಲ್ಲಿ ಕ್ಷಿಪಣಿಗಳನ್ನು ಬಳಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾತ್ರಿಯಿಡೀ ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡಿದರು ಎಂದು ಅಸೋಸಿಯೇಟೆಡ್ ಪ್ರೆಸ್‌ಗೆ ಹೆಸರು ಬಹಿರಂಗಪಡಿಸಲು ಬಯಸದ ಭಾರತೀಯ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಆಪರೇಷನ್ ಸಿಂಧೂರ್ ಎಂದರೇನು?

ಭಾರತದ ʼಆಪರೇಷನ್ ಸಿಂಧೂರ್ʼ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ನಡೆಸುತ್ತಿರುವ ಸರ್ಜಿಕಲ್ ಸ್ಟ್ರೈಕ್ ಆಗಿದೆ. ಪೆಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, 9 ಸ್ಥಳಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು ಇವುಗಳೇ ಎನ್ನಲಾಗಿದೆ.

ಕಾರ್ಯಾಚರಣೆಯಲ್ಲಿ ನಿಷೇಧಿತ ಜೈಶ್ –ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ನೆಲೆಯಿರುವ ಬಹವಾಲ್‌ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‌ನಲ್ಲಿನ ಸರ್ಜಾಲ್, ಕೋಟ್ಲಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‌ನ ಸೈಯದ್ನಾ ಬಿಲಾಲ್ ಕ್ಯಾಂಪ್‌ಗಳ ಮೇಲೆ ಭಾರತ ದಾಳಿ ನಡೆಸಿದೆ.

ಲಷ್ಕರ್‌–ಎ–ತಯಬಾ ಉಗ್ರ ಸಂಘಟನೆಯ ಶಿಬಿರಗಳಿರುವ ಮುರ್ಡಿಕೆಯ ಮರ್ಕಝ್ ತೈಬಾ, ಬರ್ನಾಲಾದಲ್ಲಿ ಮರ್ಕಝ್ ಅಹ್ಲೆ ಹದಿತ್ ಮತ್ತು ಮುಜಫರಾಬಾದ್‌ನ ಶ್ವವಾಯಿ ನಲ್ಲಾ ಮೇಲೆ ದಾಳಿ ನಡೆದಿದೆ.

ಮಧ್ಯರಾತ್ರಿ 1.44ರ ಸುಮಾರಿಗೆ ಭಾರತ ಕ್ಷಿಪಣಿ ದಾಳಿ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳ ಕ್ರಮಗಳು ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ ಬದಲಾಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ದಾಳಿಗೆ ಆಯ್ದುಕೊಂಡ 9 ಸ್ಥಳಗಳಲ್ಲಿ 4 ಪಾಕಿಸ್ತಾನದಲ್ಲಿದ್ದರೆ ಇನ್ನುಳಿದ ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿವೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!