spot_img
Wednesday, April 1, 2026
spot_img

ಆಪರೇಷನ್‌ ಸಿಂಧೂರ್‌ : ಬೆಂಗಳೂರಿನಿಂದ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು !

ಜನಪ್ರತಿನಿಧಿ (ಬೆಂಗಳೂರು) : ಭಾರತೀಯ ಸೇನೆ ಇಂದು(ಬುಧವಾರ) ಬೆಳಗಿನ ಜಾವ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್​ನ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.

ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧೆಡೆ ವಿಮಾನ ಸಂಚಾರ ರದ್ದುಗೊಳಿಸಿದೆ. ಬೆಂಗಳೂರಿನಿಂದ ಹಲವು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ಸಹ ರದ್ದು ಮಾಡಲಾಗಿದೆ.

ಸದ್ಯ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು ಮತ್ತುಕಾಶ್ಮೀರ, ರಾಜಸ್ಥಾನದ ಜೋಧಪುರ್, ಉತ್ತರ ಪ್ರದೇಶದ ಅಯೋಧ್ಯೆ, ಲಖನೌಮತ್ತು ಘಾಜಿಯಾಬಾದ್​​ಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದ ಮಾಡಲಾಗಿದೆ.

ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದ್ದು, ಇದು ನಮ್ಮ ಸಂಪರ್ಕ‌ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದ್ದು, ಇದು ನಮ್ಮ ಸಂಪರ್ಕ‌ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಿದೆ.

ಈ ಕಾರಣ, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ, ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಿ ಪರಿಶೀಲಿಸಲು ವಿನಂತಿಸಲಾಗಿದೆ.

ಪ್ರಯಾಣಿಕರು ತಮ್ಮ ವಿಮಾನಗಳ ವೇಳಾಪಟ್ಟಿಯಲ್ಲಿನ ಬದಲಾವಣೆಗಳನ್ನು ಆಯಾ ವಿಮಾನಯಾನ ಸಂಸ್ಥೆಗಳ ಅಧಿಕೃತ ಎಕ್ಸ್ ಖಾತೆಗಳ ಮೂಲಕ ಪಡೆಯಬಹುದಾಗಿದೆ ಎಂದು ತಿಳಿಸಿದೆ.

https://x.com/blrairport_kn/status/1920009551526691080

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!