spot_img
Sunday, February 15, 2026
spot_img

ಸೇನೆಗೆ ಶಕ್ತಿ ತುಂಬಲು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ : ರಾಜ್ಯ ಕಾಂಗ್ರೆಸ್‌ ಸರ್ಕಾರ

ಜನಪ್ರತಿನಿಧಿ (ಬೆಂಗಳೂರು) : ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಇಂದು(ಬುಧವಾರ) ನಸುಕಿನ ಜಾವ ಭಾರತ ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆ ನಡೆಸಿದೆ.

ಪೆಹಲ್ಗಾಮ್‌ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಹಾಗೂ ಉಗ್ರರ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಕಾಂಗ್ರೆಸ್‌ ಪಕ್ಷ ಬೆಂಬಲಿಸುವುದಾಗಿ ಈಗಾಗಲೇ ಹೇಳಿಕೊಂಡಿದೆ.

ಇಂದು ಬೆಳಗಿನ ಜಾವ ಒಂಬತ್ತು ಪಾಕ್‌ ಉಗ್ರಗಾಮಿಗಳ ತಾಣಗಳ ಮೇಲೆ ವಾಯಸೇನೆ ಮಾಡಿರುವ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಗೆ ದೇಶದಾದ್ಯಂತ ಬಾರಿ ಶ್ಲಾಘನೆ ವ್ಯಕ್ತವಾಗುತ್ತಿದೆ. ಭಾರತೀಯ ಸೇನೆ ತೆಗೆದುಕೊಂಡ ಈ ನಿರ್ಧಾರಕ್ಕೆ ದೇಶ ಒಗ್ಗಟ್ಟಾಗಿ ಬೆಂಬಲಿಸುತ್ತಿದೆ.

ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂದೂರ್ ಕಾರ್ಯಾಚರಣೆಗೆ ರಾಜ್ಯ ಕಾಂಗ್ರೆಸ್‌ ಕೂಡ ಬೆಂಬಲಿಸಿದ್ದು, ದೇಶದ ಸೈನಿಕರಿಗೆ ಶಕ್ತಿ ತುಂಬಲು ಅವರ ಶ್ರೇಯಸ್ಸಿಗೆ ಪ್ರಾರ್ಥಿಸಿ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಹೇಳಿದೆ.

ಮಾತ್ರವಲ್ಲದೇ, ಋಜ್ಯ ಕಾಂಗ್ರೆಸ್‌ ಸರ್ಕಾರ ಭಯೋತ್ಪಾದನೆಯ ವಿರುದ್ಧ ದೇಶದ ಸೈನ್ಯದ ಎಲ್ಲಾ ಕ್ರಮಗಳನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿಯೂ ಹೇಳಿಕೊಂಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!