spot_img
Wednesday, April 1, 2026
spot_img

ಬಿ. ಬಿ. ಹೆಗ್ಡೆ ಕಾಲೇಜು ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಜನಪ್ರತಿನಿಧಿ (ಕುಂದಾಪುರ) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ

ವಾರ್ಷಿಕೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮೇ 02, 2025ರಂದು ಕಾಲೇಜಿನ ಬಿ.ಎಮ್.ಎಸ್. ಕ್ರೀಡಾಂಗಣದ ಬಯಲು ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹಮ್ಮಿಕೊಂಡ ವಿವಿಧ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಈ ಸಂದರ್ಭ ಯಕ್ಷಗಾನ ಕಲಾರಂಗ ಉಡುಪಿಯ ಕಾರ್ಯದರ್ಶಿ ಮುರಳಿ ಕಡೇಕಾರ್ ಮಾತನಾಡಿ, ಪಠ್ಯದೊಂದಿಗಿನ ಪಠ್ಯಪೂರಕ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ ಎಂದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಮಂಗಳೂರಿನ ಕೆನರಾ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ಸೀಮಾ ಎಸ್. ಪ್ರಭು ಮಾತನಾಡಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಕ್ರಿಯಾಶೀಲವಾಗಿಡುವುದಲ್ಲದೆ ಶಿಸ್ತು ಬದ್ಧವಾದ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುತ್ತದೆ ಎಂದರು.

ಮೋಹನೇಶ್ ಚಂಗಪ್ಪ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ- ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕರಾದ ವೀಣಾ ಭಟ್ ಸ್ವಾಗತಿಸಿ, ರೇಷ್ಮಾ ಶೆಟ್ಟಿ ವಂದಿಸಿದರು.

ನಿರ್ವಹಣಾ ವಿಭಾಗದ ಪ್ರಾಧ್ಯಾಪಕಿ ಅವಿತಾ ಕೊರೆಯ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಅಕ್ಷಯ್ ಕುಮಾರ್ ಬಹುಮಾನಿತರ ಪಟ್ಟಿಯನ್ನು ವಾಚಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾದ ರವೀನಾ ಸಿ. ಪೂಜಾರಿ, ಸ್ಟಾಲಿನ್ ಡಿ’ಸೋಜ, ವಾಣಿಜ್ಯ ಪ್ರಾಧ್ಯಾಪಕಿ ವಿನಯ ವಿ. ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು.  ವಾಣಿಜ್ಯ ಪ್ರಾಧ್ಯಾಪಕ ಯೋಗೀಶ್ ಶಾನುಭೋಗ ನಿರೂಪಿಸಿದರು.

2024-25ನೇ ಶೈಕ್ಷಣಿಕ ಸಾಲಿನ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಗ್ರ ಚಾಂಪಿಯನ್ ಆಗಿ ಅಂತಿಮ ಬಿಬಿಎ, ರನ್ನರ್ ಅಪ್ ಆಗಿ ದ್ವಿತೀಯ ಬಿ.ಕಾಂ. (ಇ) ಹಾಗೂ ತೃತೀಯ ಸ್ಥಾನವನ್ನು ದ್ವಿತೀಯ ಬಿಬಿಎ ಸಮಗ್ರ ಪ್ರಶಸ್ತಿ ಪಡೆದುಕೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!