spot_img
Friday, April 3, 2026
spot_img

ಉಗ್ರವಾದಿಗಳನ್ನು ಬೆಂಬಲಿಸುವವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಸೇನೆ ಉತ್ತರಿಸಿದೆ : ಗೋಪಾಲ್‌ ಪೂಜಾರಿ

ಜನಪ್ರತಿನಿಧಿ (ಬೈಂದೂರು/ ಕುಂದಾಪುರ) : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಗೆ, ವಿಶ್ವವೇ ಮೆಚ್ಚುವ ರೀತಿಯಲ್ಲಿ ಪ್ರತಿಕಾರ ತೀರಿಸಿಕೊಂಡಿರುವ ಭಾರತದ ಹೆಮ್ಮೆಯ ಸೈನ್ಯದ ಸೈನಿಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದೇಶಿ ಉಗ್ರವಾದಿಗಳು ಭಾರತದ ಮೇಲೆ ನಡೆಸುತ್ತಿರುವ ಕುತಂತ್ರಗಳಿಗೆ ಭಾರತ ಸರಿಯಾದ ರೀತಿಯಲ್ಲಿ ಉತ್ತರ ನೀಡಬೇಕು ಎನ್ನುವ ಕೋಟ್ಯಂತರ ಭಾರತೀಯರ ಒತ್ತಾಸೆಗೆ ಪೂರಕವಾಗಿ ಮೂರು ಸೇನಾಪಡೆಗಳ ಸಮನ್ವಯದಿಂದ ಮಂಗಳವಾರ ನಡುರಾತ್ರಿಯಲ್ಲಿ ಭಾರತದ ಸೈನ್ಯ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆ, ಉಗ್ರವಾದಿಗಳು ಹಾಗೂ ಉಗ್ರವಾದಿಗಳನ್ನು ಬೆಂಬಲಿಸುವವರಿಗೆ ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ಉತ್ತರ ನೀಡಿದೆ ಎಂದು ಅವರು ಹೇಳಿದ್ದಾರೆ.

ಭಯೋತ್ಪಾದಕರು ಹಾಗೂ ಉಗ್ರವಾದಿಗಳ ನಿಗ್ರಹಕ್ಕಾಗಿ ನಡೆಯುತ್ತಿರುವ ಕಾರ್ಯಾಚರಣೆಯ ಈ ಸಂದಿಗ್ಧ ಕಾಲದಲ್ಲಿ ದೇಶವಾಸಿಗಳಾದ ನಾವೆಲ್ಲ ಒಟ್ಟಾಗಿರಬೇಕು ಹಾಗೂ ನಮ್ಮನ್ನು ರಕ್ಷಣೆ ಮಾಡುವ ಸೈನಿಕರಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!