spot_img
Monday, March 16, 2026
spot_img

ನಮ್ಮ ಮೆಟ್ರೋ ಪ್ರಯಾಣ ಇನ್ನಷ್ಟು ಸುಲಭ : ಸೆಲ್ಫ್‌ ಸರ್ವೀಸ್‌ ಟಿಕೇಟ್‌ ಮಷಿನ್‌ ಅಳವಡಿಸಿದ BMRCL !

ಜನಪ್ರತಿನಿಧಿ (ಬೆಂಗಳೂರು) :  ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ಸಿಹಿಸುದ್ದಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ಹೊಸ ಕ್ಯೂ.ಆರ್​ ಟಿಕೆಟ್ ಯಂತ್ರಗಳನ್ನು ಪರಿಚಯಿಸಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಅಳವಡಿಸಿರುವ ಈ ಸ್ವಯಂ ಸೇವಾ ಟಿಕೆಟ್ ನೀಡುವ ಯಂತ್ರಗಳು 30 ಸೆಕೆಂಡುಗಳಲ್ಲಿ ಟಿಕೆಟ್​ಗಳನ್ನು ಒದಗಿಸುತ್ತವೆ. ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಇಂತಹ 10 ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಬಿಎಂಆರ್​ಸಿಎಲ್​ ತನ್ನ ಪ್ರಕಟಣೆಯಲ್ಲಿ​ ತಿಳಿಸಿದೆ.

ಜನದಟ್ಟಣೆ ನಿಯಂತ್ರಣಕ್ಕೆ ಹೊಸ ಕ್ರಮ

ಪೀಕ್‌ ಅವರ್‌ (ಪ್ರೈಮ್‌ ಟೈಮ್‌)ಗಳಲ್ಲಿ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಸಾಮಾನ್ಯವಾಗಿ ಜನದಟ್ಟಣೆ ಸೃಷ್ಟಿಯಾಗುತ್ತವೆ. ಪ್ರಯಾಣಿಕರು ಟಿಕೆಟ್ ಪಡೆಯುವ ಉದ್ದೇಶದಿಂದ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತದೆ. ಈ ಸರತಿ ಸಾಲು ಜನದಟ್ಟಣೆ ತಪ್ಪಿಸಲು ಬಿಎಂಆರ್ ಸಿಎಲ್ ಈ ಯಂತ್ರಗಳನ್ನು ಅಳವಡಿಸಿದೆ. ಈ ಯಂತ್ರಗಳ ಬಳಕೆ ಮಾಡುವ ಮೂಲಕ ಪ್ರಯಾಣಿಕರು ಇನ್ನು ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ. ಟಿಕೇಟ್‌ ಗಳನ್ನೂ ಕೂಡ ಅತಿ ಶೀಘ್ರದಲ್ಲೇ ಪಡೆದುಕೊಂಡು ಪ್ರಯಾಣಿಸಬಹುದಾಗಿದೆ.

ಕೆಲವೇ ಕ್ಲಿಕ್ ಗಳಲ್ಲಿ ಟಿಕೆಟ್

ಈ ಯಂತ್ರಗಳಿಂದ ಮೂರರಿಂದ ನಾಲ್ಕು ಕ್ಲಿಕ್‌ನಲ್ಲಿ ವೇಗವಾಗಿ ಮತ್ತು ಸುಲಭವಾಗಿ ಪ್ರಯಾಣಿಕ ಸ್ವಯಂ ಆಗಿ ಟಿಕೆಟ್ ಪಡೆದುಕೊಳ್ಳಬಹುದು. ವೇಗವಾಗಿ ಮತ್ತು ಸುಲಭವಾಗಿ ಟಿಕೆಟ್ ಪಡೆಯಲು ಮೆಟ್ರೋ ನಿಲ್ದಾಣದಲ್ಲಿ ಸ್ವಯಂ ಸೇವಾ ಕ್ಯೂ.ಆರ್ ಟಿಕೆಟ್ ಯಂತ್ರಗಳ ವ್ಯವಸ್ಥೆ ಮಾಡಲಾಗಿದೆ. ಆ ಮೂಲಕ ಪ್ರಯಾಣಿಕರು 30 ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ಟಿಕೆಟ್ ಪಡೆಯಬಹುದಾಗಿ ಎಂದು ಬಿಎಂಆರ್​ಸಿಎಲ್ (BMRCL)​ ತಿಳಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ, ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಉತ್ತಮಪಡಿಸಲು ಮತ್ತು ಡಿಜಿಟಲ್ ನವೀನತೆಗಳನ್ನು ಅಳವಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಬಿಎಂಆರ್‌ಸಿಎಲ್ ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ 10 ನೂತನ ಸ್ವಯಂ ಸೇವಾ ಟಿಕೆಟ್ ಯಂತ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.

‘ಪ್ರಯಾಣಿಕರ ಅನುಭವವನ್ನು ಸುಧಾರಿಸಲು ನಾವು ತಂತ್ರಜ್ಞಾನವನ್ನು ಅಳವಡಿಸುತ್ತಿದ್ದೇವೆ. ಸ್ವಯಂ ಸೇವಾ ಟಿಕೆಟ್ ಯಂತ್ರಗಳ ಪರಿಚಯವು ನಮ್ಮ ಮೆಟ್ರೋ ಸೇವೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ, ಸುಗಮವಾಗಿ ಮತ್ತು ಆಧುನಿಕ ಪಾವತಿ ವಿಧಾನಗಳೊಂದಿಗೆ ಹೊಂದಿಕೊಳ್ಳುವಂತೆ ಮಾಡುವ ಮಹತ್ವದ ಹೆಜ್ಜೆಯಾಗಿದೆ. ಪ್ರಯಾಣಿಕರ ಅನುಕೂಲತೆ ಮತ್ತು ಸುಲಭ ಪ್ರವೇಶದತ್ತ ಇದು ನಮ್ಮ ಬದ್ಧತೆಯ ಪ್ರತಿಬಿಂಬವಾಗಿದೆ’ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

https://x.com/OfficialBMRCL/status/1920075799425700242

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!