spot_img
Monday, March 16, 2026
spot_img

ಆಪರೇಷನ್‌ ಸಿಂದೂರ್‌ : ಪ್ರತಿಯೊಬ್ಬ ಭಾರತೀಯ ನಾಗರಿಕನು ಒಗ್ಗಟ್ಟಿನಿಂದಿರಬೇಕು : ಸರ್ವಪಕ್ಷಗಳ ಸಭೆಯಲ್ಲಿ ನಮೋ ಅಭಿಮತ

ಜನಪ್ರತಿನಿಧಿ (ನವ ದೆಹಲಿ) : ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಭಾರತದ ಪ್ರದೇಶಗಳಲ್ಲಿದ್ದ ಉಗ್ರ ಮೂಲಸೌಕರ್ಯಗಳ ಮೇಲೆ ಭಾರತ ನಡೆಸಿದ ‘ಆಪರೇಷನ್ ಸಿಂದೂರ್’ ಬಗ್ಗೆ ಕೇಂದ್ರ ಸರ್ಕಾರ ಸರ್ವ ಪಕ್ಷಗಳ ಸಭೆಯಲ್ಲಿ ಮಾಹಿತಿ ನೀಡಿದೆ.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ನಿಲ್ಲುವಂತೆ ಒತ್ತಾಯಿಸಿದರು ಎಂದು ಮೂಲಗಳ ಆಧಾರದಲ್ಲಿ ರಾಷ್ಟ್ರೀಯ ಸುದ್ದಿ ವಾಹಿನಿ ಇಂಡಿಯಾ ಟುಡೇ ವರದಿ ಮಾಡಿದೆ.

ಭಾರತ ದೇಶ ಅತ್ಯಂತ ವಿಸ್ತಾರವಾದ ಗಡಿಯಾಚೆಗಿನ ದಾಳಿಗಳಲ್ಲಿ ಒಂದಾದ ಪಾಕಿಸ್ತಾನದೊಳಗಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ್ದು, ಸಶಸ್ತ್ರ ಪಡೆಗಳ ಶೌರ್ಯದ ಬಗ್ಗೆ ವಿರೋಧ ಪಕ್ಷಗಳಿಗೆ ಸರ್ಕಾರ ತಿಳಿಸಿದೆ.

ಪ್ರತಿಯೊಬ್ಬ ಭಾರತೀಯ ನಾಗರಿಕನು ಒಗ್ಗಟ್ಟಿನಿಂದ ನಿಲ್ಲಬೇಕು ಎನ್ನುವುದೇ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶ ಆಗಿತ್ತು ಎಂದು ವರದಿ ವಿಸ್ತರಿಸಿದೆ.

ಇಂದು(ಗುರುವಾರ) ನಡೆದ ಸರ್ವಪಕ್ಷಗಳ ಸಭೆಯ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಿದ್ದರು. ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್‌. ಜೈಶಂಕ‌ರ್, ಮತ್ತು ಸಚಿವರಾದ ಜೆ.ಪಿ. ನಡ್ಡಾ ಮತ್ತು ನಿರ್ಮಲಾ ಸೀತಾರಾಮನ್‌ ಭಾಗವಹಿಸಿದ್ದರು.

ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ಪಕ್ಷವನ್ನು ಪ್ರತಿನಿಧಿಸಿದರೆ, ತೃಣಮೂಲ ಕಾಂಗ್ರೆಸ್‌ನಿಂದ ಸಂದೀಪ್ ಬಂಡೋಪಾಧ್ಯಾಯ ಮತ್ತು ಡಿಎಂಕೆಯ ಟಿ.ಆ‌ರ್. ಬಾಲು ಸಭೆಯಲ್ಲಿ ಭಾಗವಹಿಸಿದ್ದರು.

ಸಮಾಜವಾದಿ ಪಕ್ಷದಿಂದ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವಸೇನೆಯ (ಯುಬಿಟಿ) ಸಂಜಯ್ ರಾವತ್, ಎನ್‌ಸಿಪಿ (ಎಸ್‌ಪಿ) ಸುಪ್ರಿಯಾ ಸುಳೆ, ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಬಿಜೆಡಿಯ ಸಸ್ಮಿತ್ ಪಾತ್ರ ಒಳಗೊಂಡಂತೆ ಇತರೆ ವಿರೋಧ ಪಕ್ಷದ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

ರಕ್ಷಣಾ ಸಚಿವರು ಮತ್ತು ಗೃಹ ಸಚಿವರು ಆಪರೇಷನ್‌ ಸಿಂದೂರ್‌ ಬಗ್ಗೆ ಗುರುವಾರ ಸರ್ವಪಕ್ಷಗಳ ಮಾಹಿತಿ ನೀಡಿದ ನಂತರ, ಪಾಕಿಸ್ತಾನದಿಂದ ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸಲು ಸರ್ಕಾರಕ್ಕೆ ವಿರೋಧ ಪಕ್ಷವು ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!