spot_img
Sunday, February 15, 2026
spot_img

ದೃಢಸಂಕಲ್ಪ ಮತ್ತು ನಿರಂತರ ಪ್ರಯತ್ನದಿಂದ ಇಂಗ್ಲಿಷ್ ಕಲಿಕೆ ಸಾಧ್ಯ-ಅಶೋಕ್ ತೆಕ್ಕಟ್ಟೆ

ಶಂಕರನಾರಾಯಣ: ಜಾಗತೀಕರಣದ ಯುಗದಲ್ಲಿ ಇಂಗ್ಲಿಷ್ ಕಲಿಕೆಯ ಅವಶ್ಯಕತೆ ಮತ್ತಷ್ಟು ಹೆಚ್ಚಿದ್ದು, ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಉನ್ನತ ಸಾಧನೆಗೆ ಮುಖ್ಯ ಸಾಧನವಾಗಿದೆ. ವಿದ್ಯಾರ್ಥಿಗಳು ಹಿಂಜರಿಕೆಯನ್ನು ಬದಿಗಿಟ್ಟು, ಆತ್ಮವಿಶ್ವಾಸದಿಂದ ನಿರಂತರ ಅಭ್ಯಾಸ ನಡೆಸಿದರೆ, ಉತ್ತಮ ಸಂವಹನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಾಧ್ಯವೆಂದು ರಾಜ್ಯಮಟ್ಟದ ಇಂಗ್ಲಿಷ್ ತರಬೇತುದಾರ ಅಶೋಕ್ ತೆಕ್ಕಟ್ಟೆ ಹೇಳಿದರು.

ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಮತ್ತು ಆಂಗ್ಲ ಭಾಷಾ ವಿಭಾಗದ ವತಿಯಿಂದ ಆಯೋಜಿಸಲಾದ “ಇಂಗ್ಲಿಷ್ ಸಂವಹನ ಕೌಶಲ್ಯ ವೃದ್ಧಿ ಮತ್ತು ಅಡ್ಡಿ ಆತಂಕ ನಿವಾರಣೆ” ಕುರಿತ ವಿಶೇಷ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಿರಂತರ ಓದು ಮತ್ತು ಸಂವಹನಾ ಕೌಶಲ್ಯಗಳತ್ತ ಹೆಚ್ಚಿನ ಗಮನ ಕೊಡುವ ಮೂಲಕ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಯಶಸ್ವಿಯಾಗಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಗಿರೀಶ್ ಶಾನುಭೋಗ್, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜನಾಧಿಕಾರಿ ಡಾ. ವಸಂತ, ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು ಮತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇಂಗ್ಲಿಷ್ ವಿಭಾಗದ ಮುಖ್ಯಸ್ಥ ರಮೇಶ ಎನ್. ಎಸ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!