spot_img
Wednesday, April 1, 2026
spot_img

ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ: ಸಿ‌ಐಟಿಯು ಖಂಡನೆ

ಕುಂದಾಪುರ: ಮೇ.೦೮; ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಇರುವ ಅಂಡರ್ ಪಾಸ್ ಕೆಳಗೆ ದುಡಿದು ಬಂದು ಮಲಗಿರುವ ವಲಸೆ ಕಾರ್ಮಿಕರನ್ನು ನೆನ್ನೆ ( ಮೇ ೭) ರಾತ್ರಿ ತೆರವುಗೊಳಿಸಲು ಅವರ ಮೇಲೆ ದೌರ್ಜನ್ಯ ನಡೆಸಿರುವ ಕ್ರಮವನ್ನು ಕುಂದಾಪುರ ಸಿ‌ಐಟಿಯು ಸಂಚಲನ ಸಮಿತಿ ತೀವ್ರವಾಗಿ ಖಂಡಿಸಿದೆ.
ನಗರದ ಕೆಲವು ಶ್ರೀಮಂತರ ಮರ್ಜಿಗೆ ಒಳಗಾಗಿ ಕೆಲವು ಅಧಿಕಾರಿಗಳು ಮತ್ತು ಇಲಾಖೆಗಳು ಮನೆ ಇಲ್ಲದ ವಲಸೆ ಕಾರ್ಮಿಕರು ಮಲಗಿರುವುದನ್ನು ಆಗಾಗ ಆಕ್ಷೇಪಿಸಿ ಹೊಡೆಯುವುದು ಬೆದರಿಸುವುದು ನಡೆಯುತ್ತಿರುವುದು ಸಹಿಸಲು ಸಾಧ್ಯವಿಲ್ಲ ವಲಸೆ ಕಾರ್ಮಿಕರು ನಮ್ಮ ಅತಿಥಿ ಕಾರ್ಮಿಕರಾಗಿದ್ದಾರೆ ಅವರ ದುಡಿಮೆಯಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗೆ ಸಹಾಯಕ ಆಗುತ್ತಿರುವುದು ಜಿಲ್ಲಾಡಳಿತ ಗಮನಿಸಬೇಕು. ತಮ್ಮ ಕುಟುಂಬಗಳ ನಿರ್ವಹಣೆಗಾಗಿ ವಲಸೆ ಬರುವ ಕಾರ್ಮಿಕರಿಗೆ ಸರಕಾರ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಜವಾಬ್ದಾರಿ ಆಗಬೇಕೆ ಹೊರತು ವಲಸೆ ಕಾರ್ಮಿಕರನ್ನು ಮೃಗಗಳಂತೆ ನಡೆಸಿಕೊಳ್ಳುತ್ತಿರುವುದು ನಾಗರಿಕ ಸಮಾಜಕ್ಕೆ ಅಪಮಾನ ಮಾಡಿದಂತಾಗುತ್ತದೆ ಎಂದು ಸಿ‌ಐಟಿಯು ಕುಂದಾಪುರ ಸಂಚಲನ ಸಮಿತಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!