spot_img
Wednesday, March 18, 2026
spot_img

ಭಯೋತ್ಪಾದನೆಯ ವಿರುದ್ಧ ಭಾರತೀಯ ಸೇನೆ ಸಮರ : ರಾಜ್ಯ ಸರ್ಕಾರದಿಂದ ತಿರಂಗಾ ಯಾತ್ರೆ

ಜನಪ್ರತಿನಿಧಿ (ಬೆಂಗಳೂರು) : ಆಪರೇಷನ್‌ ಸಿಂಧೂರ’ ಹೆಸರಿನಲ್ಲಿ ಪಾಕಿಸ್ತಾನ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನ್ಯಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಮಿನ್ಸ್ ಸ್ಟೇರ್‌ವರೆಗೆ ಇಂದು (ಶುಕ್ರವಾರ) ‘ತಿರಂಗಾ ಯಾತ್ರೆ’ಯನ್ನು ಕಾಂಗ್ರೆಸ್‌ ಆಯೋಜಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ಯಾತ್ರೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸರ್ಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಾಹಿತಿಗಳು, ಚಿಂತಕರು, ಚಿತ್ರರಂಗದವರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಎಲ್ಲರಿಗೂ ಭಾಗವಹಿಸಲು ಮುಕ್ತ ಆಹ್ವಾನ ನೀಡಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಿಳಿಸಿದ್ದಾರೆ.

ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಒಕ್ಕೊರಲಿನ ಬೆಂಬಲ ನೀಡುವ ಸಲುವಾಗಿ ಇಂದು ಆಯೋಜಿಸಿರುವ ‘ತಿರಂಗಾ ರ್‍ಯಾಲಿ’ಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ. ದೇಶಕ್ಕಾಗಿ ಹೋರಾಡುತ್ತಿರುವ ಭದ್ರತಾ ಪಡೆಗಳಿಗೆ ಗೌರವ ಸಲ್ಲಿಸೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ತಿರಂಗ ರ್ಯಾಲಿಯು ಏಕತೆ ಮತ್ತು ರಾಷ್ಟ್ರೀಯ ಹೆಮ್ಮೆಯ ಪ್ರಬಲ ಅಭಿವ್ಯಕ್ತಿಯಾಗಿದೆ. ನಮ್ಮ ಸಶಸ್ತ್ರ ಪಡೆಗಳಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬ ಭಾರತೀಯನ ಶಕ್ತಿ ಮತ್ತು ದೃಢಸಂಕಲ್ಪದ ಸಾಮೂಹಿಕ ಪ್ರದರ್ಶನವಾಗಿದೆ ಎಂದಿದ್ದಾರೆ.

ನಾವು ಸಮಾಜದ ಎಲ್ಲಾ ವರ್ಗಗಳನ್ನು ಆಪರೇಷನ್‌ ಸಿಂಧೂರ್‌ ಯಶಸ್ವಿ ಬೆಂಬಲಿಸಿ ನಡೆಸುತ್ತಿರುವ ತಿರಂಗ ಪಾದಯಾತ್ರೆಗೆ ಆಹ್ವಾನಿಸಿದ್ದೇವೆ. ನಮ್ಮ ಸಶಸ್ತ್ರ ಪಡೆಗಳಿಗೆ ನಮಸ್ಕರಿಸಲು ಮತ್ತು ದೇಶದೊಂದಿಗೆ ಒಗ್ಗಟ್ಟಿನಿಂದ ನಿಲ್ಲಲು ಬಯಸುತ್ತೇವೆ. ಅಲ್ಪಾವಧಿಯಲ್ಲಿಯೇ, ನಿವೃತ್ತ ಸಶಸ್ತ್ರ ಪಡೆಗಳು, ವಿದ್ಯಾರ್ಥಿಗಳು ಮತ್ತು ಎಲ್ಲಾ ರಾಜಕೀಯ ಪಕ್ಷಗಳು ಸೇರಿದಂತೆ ಎಲ್ಲಾ ವರ್ಗದ ಜನರು ಇಲ್ಲಿ ಭಾಗವಹಿಸುತ್ತಿದ್ದಾರೆ ಎಂದು ನನಗೆ ಸಂತೋಷವಾಗಿದೆ. ಭಾರತ ಬಲಿಷ್ಠವಾಗಿದೆ. ಇಂದಿರಾ ಗಾಂಧಿಯವರ ನೇತೃತ್ವದಲ್ಲಿ ನಾವು ಪರಿಸ್ಥಿತಿಯನ್ನು ನಿರ್ವಹಿಸಿದಂತೆಯೇ, ಈಗ ಅದೇ ಸಂಭವಿಸುತ್ತದೆ ಮತ್ತು ಭಾರತ ಗೆಲ್ಲುತ್ತದೆ. ಎಂದು ತಿರಂಗ ಯಾತ್ರೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!