spot_img
Friday, January 30, 2026
spot_img

ಭಾರತ, ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ : ಐಪಿಎಲ್‌-‌ 2025ರ ಬಾಕಿ ಇರುವ ಅಷ್ಟೂ ಪಂದ್ಯಗಳು ರದ್ದು !

ಜನಪ್ರತಿನಿಧಿ (ನವ ದೆಹಲಿ) :  ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಇಂಡಿಯನ್‌ ಪ್ರಿಮಿಯರ್‌ ಲೀಗ್‌ (ಐಪಿಎಲ್)‌ 2025 ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ.

ಈ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದು ಮಾಡಲಾಗಿದೆ ಎಂದು ಹೇಳಿದೆ.‌ “ರಾಷ್ಟ್ರೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ನಮ್ಮ ಸಶಸ್ತ್ರ ಪಡೆಗಳು ಮತ್ತು ಜನರೊಂದಿಗೆ ನಿಲ್ಲುವುದಾಗಿ ಹೇಳಿರುವ ಬಿಸಿಸಿಐ, ಐಪಿಎಲ್‌ ಪಂದ್ಯಾವಳಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಪ್ರಕಟಿಸಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಇಂಡಿಯನ್‌ ಪ್ರಿಮಿಯರ್‌ ಲೀಗ್‌ (ಐಪಿಎಲ್)‌ 2025 ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿಮ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿರುವ ಒಟ್ಟು 9 ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಮೇಲೆ, ಉಭಯ ರಾಷ್ಟ್ರಗಳ ನಡುವಿನ ಗಡಿಯಲ್ಲಿ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿದ್ದ ಐಪಿಎಲ್‌ 2025ರ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.

ನಿನ್ನೆ (ಮೇ.8-ಗುರುವಾರ) ಹಿಮಾಚಲಾ ಪ್ರದೇಶದ ಧರ್ಮಾಶಾಲಾ ಮೈದಾನದಲ್ಲಿ ನಡೆಯಬೇಕಿದ್ದ ಪಂಜಾಬ್‌ ಕಿಂಗ್ಸ್(ಪಿಬಿಕೆಎಸ್‌) ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ) ನಡುವಿನ ಪಂದ್ಯವನ್ನು ರದ್ದುಗೊಳಿಸಿ ಬಿಸಿಸಿಐ ನಿರ್ಧಾರ ಪ್ರಕಟಿಸಿತ್ತು. ಇದೀಗ ಇಡೀ ಪಂದ್ಯಾವಳಿಯನ್ನೇ ಅನಿರ್ದಿಷ್ಟಾವಧಿಗೆ ರದ್ದುಗೊಳಿಸಿ ಬಿಸಿಸಿಐ ನಿರ್ಣಯ ಪ್ರಕಟಿಸಿದೆ.

ಬಿಸಿಸಿಐ ನಿರ್ಣಯದಂತೆ ಐಪಿಎಲ್‌ 2025 ಪಂದ್ಯಾವಳಿಯ ಬಾಕಿ ಉಳಿದ ಎಲ್ಲಾ 16 ಪಂದ್ಯಗಳು ರದ್ದುಗೊಂಡಿವೆ. ಇದರಿಂದಾಗಿ ಇಂದು (ಮೇ.9-ಶುಕ್ರವಾರ) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಲಖ್ನೋ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) ನಡುವಿನ ಪಂದ್ಯವೂ ರದ್ದುಗೊಂಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!