spot_img
Wednesday, March 18, 2026
spot_img

ಮರವಂತೆ, ಸೋಮೇಶ್ವರ, ಕೊಲ್ಲೂರು ಪ್ರಸಾಸೋದ್ಯಮ ಅಭಿವೃದ್ದಿಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅಸ್ತು

ಬೈಂದೂರು: ಮರವಂತೆ ಸಮುದ್ರ ದಡದಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ನಡುವೆ ರಸ್ತೆ ಹಾದು ಹೋಗಿದ್ದು ಇದೊಂದು ಅದ್ಭುತ ಪ್ರದೇಶವಾಗಿದ್ದು, ಇಲ್ಲಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ ಸಿದ್ಧಪಡಿಸಿ ನೀಡಿದಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು.

ಅವರು ಮೇ 8ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಮರವಂತೆ, ಸೋಮೇಶ್ವರ ಕಡಲಕಿನಾರೆ ವೀಕ್ಷಿಸಿ ಮಾತನಾಡಿದರು.

ಲೋಕಸಭಾ ಕ್ಷೇತ್ರದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯ ವಿಶೇಷ ಕಾಳಜಿಯ ಮೇರೆಗೆ ಸಂಸದ ಬಿ.ವೈ ರಾಘವೇಂದ್ರ ಅವರ ಮನವಿಯ ಹಿನ್ನೆಲೆಯಲ್ಲಿ ಸಚಿವರು ಕ್ಷೇತ್ರಕ್ಕೆ ಆಗಮಿಸಿದ್ದರು. ಕೊಲ್ಲೂರು ಕ್ಷೇತ್ರದ ಅಭಿವೃದ್ಧಿಯ ಕುರಿತು ಕಳೆದ ಅಧಿವೇಶನದ ಸಮಯದಲ್ಲಿ ಸ್ಥಳೀಯ ಶಾಸಕರು ಹಾಗೂ ಮುಖಂಡರ ಜೊತೆಗೆ ಕೇಂದ್ರ ಪ್ರವಾಸೋಧ್ಯಮ ಸಚಿವರನ್ನು ಭೇಟಿ ಮಾಡಲಾಗಿತ್ತು. “ಸಾಸಿ” ಎನ್ನುವ ಯೋಜನೆಯಡಿ ಪಡುವರಿ – ಸೋಮೇಶ್ವರ, ಮರವಂತೆ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬೇಡಿಕೆಯಿಟ್ಟು ಪ್ರಸ್ತಾವನೆ ಕಳಿಸಲಾಗಿತ್ತು.

ಸಚಿವರು ಮರವಂತೆಯಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಶುಭಾರಂಭಗೊಂಡ “ಸ್ಕೈ ಡೈನಿಂಗ್” ವಿಶೇಷ ಹೋಟೆಲ್ ವೀಕ್ಷಣೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವರ ಈ ಒಂದು ವಿಶೇಷ ಭೇಟಿಯಿಂದ ಕೇಂದ್ರದಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುದಾನ ದೊರೆತು ಭವಿಷ್ಯದಲ್ಲಿ ರೂಪಿಸಿರುವ ಅನೇಕ ಯೋಜನೆಗಳು ಸಕಾರಾಗೊಳ್ಳುವ ಕನಸು ನನಸಾಗುವ ಹೊಸ ಆಶಾಭಾವ ಮೂಡಿದೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ರೂಪುಗೊಳ್ಳುವ ಭರವಸೆ ಮೂಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ , ಉಡುಪಿ ಜಿಲ್ಲಾಧಿಕಾರಿಗಳಾದ ಡಾ. ವಿದ್ಯಾಕುಮಾರಿ , ಕುಂದಾಪುರ ಉಪವಿಭಾಗಾಧಿಕಾರಿ  ರಶ್ಮೀ , ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ , ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,  ವೆಂಕಟೇಶ್ ಕಿಣಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!