spot_img
Wednesday, April 1, 2026
spot_img

ಭಾರತ – ಪಾಕಿಸ್ತಾನ ಉದ್ವಿಗ್ನ : ಯುಕೆ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಜೈಶಂಕರ್ ಮಾತುಕತೆ !

ಜನಪ್ರತಿನಿಧಿ (ನವದೆಹಲಿ) : ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಹೆಚ್ಚಾಗಿರುವಂತೆಯೇ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಶುಕ್ರವಾರ ಬ್ರಿಟಿಷ್ ವಿದೇಶಾಂಗ ಸಚಿವ ಡೇವಿಡ್ ಲ್ಯಾಮಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಭಯೋತ್ಪಾದನೆಗೆ “ಶೂನ್ಯ ಸಹಿಷ್ಣುತೆ” ಇರಬೇಕು ಎಂದು ತಿಳಿಸಿದ್ದಾರೆ.

ನವದೆಹಲಿ ಮತ್ತು ಇಸ್ಲಾಮಾಬಾದ್ ನಡುವೆ ಉದ್ವಿಗ್ನತೆ ಕಡಿಮೆ ಮಾಡುವ ಭಾರತದ ಕಾರ್ಯತಂತ್ರ ಪಾಲುದಾರರ ಪ್ರಯತ್ನಗಳ ಹಿನ್ನೆಲೆಯಲ್ಲಿ ಜೈಶಂಕರ್- ಲ್ಯಾಮಿ ನಡುವೆ ಮಾತುಕತೆ ನಡೆದಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಎಸ್. ಜೈಶಂಕರ್, ಭಯೋತ್ಪಾದನೆ ಎದುರಿಸುವುದರ ಮೇಲೆ ಚರ್ಚೆಗಳು ಕೇಂದ್ರೀಕೃತವಾಗಿತ್ತು. ಅದಕ್ಕಾಗಿ ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ ಇರಬೇಕು ಎಂದು ಹೇಳಿದ್ದಾರೆ.

ಜೈಶಂಕರ್ ಅವರು ಗುರುವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, ಇಟಲಿಯ ಉಪ ಪ್ರಧಾನಿ ಆಂಟೋನಿಯೊ ತಜಾನಿ ಮತ್ತು EU ವಿದೇಶಾಂಗ ವ್ಯವಹಾರಗಳ ಉನ್ನತ ಪ್ರತಿನಿಧಿ ಕಾಜಾ ಕಲ್ಲಾಸ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು.

ಬುಧವಾರ ಭಾರತದ ಆಪರೇಷನ್ ಸಿಂಧೂರ್ ಮತ್ತು 15 ಭಾರತೀಯ ನಗರಗಳ ಮೇಲೆ ದಾಳಿ ಮಾಡುವ ಪಾಕ್ ಪ್ರಯತ್ನ ವಿಫಲತೆ ನಡುವೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಗಮನಾರ್ಹವಾಗಿ ಹೆಚ್ಚಾಯಿತು. ಭಾರತ ಮತ್ತು ಪಾಕಿಸ್ತಾನದ ನಡುವಿನ ಸದ್ಯದ ಉದ್ವಿಗ್ನತೆಗಳು ಗಂಭೀರ ಕಳವಳಕಾರಿಯಾಗಿದೆ ಎಂದು ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಬುಧವಾರ ಹೇಳಿದ್ದರು.

ಭಾರತ ಮತ್ತು ಪಾಕಿಸ್ತಾನವನ್ನು ಸಂಯಮ ತೋರಿಸಲು ಮತ್ತು ತ್ವರಿತ, ರಾಜತಾಂತ್ರಿಕ ಮಾರ್ಗ ಕಂಡುಕೊಳ್ಳಲು ನೇರ ಮಾತುಕತೆಯಲ್ಲಿ ತೊಡಗುವಂತೆ ಬ್ರಿಟನ್ ಸರ್ಕಾರ ಒತ್ತಾಯಿಸುತ್ತದೆ ಎಂದು ಹೇಳಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!