spot_img
Saturday, February 14, 2026
spot_img

ಉನ್ನತ ಮಿಲಿಟರಿ ಅಧಿಕಾರಿಗಳೊಂದಿಗೆ ಅಮಿತ ಶಾ ಹೈವೋಲ್ಟೇಜ್‌ ಸಭೆ | ಗಡಿ ಭದ್ರತೆ ಬಗ್ಗೆ ಪರಿಶೀಲನೆ

ಜನಪ್ರತಿನಿಧಿ (ನವದೆಹಲಿ) : ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷದ ಹಿನ್ನೆಲೆಯಲ್ಲಿ, ಗೃಹ ಸಚಿವ ಅಮಿತ್ ಶಾ ಅವರು ಇಂದು(ಶುಕ್ರವಾರ) ಭಾರತದ ಪಾಕಿಸ್ತಾನ ಗಡಿ ಮತ್ತು ದೇಶದ ವಿಮಾನ ನಿಲ್ದಾಣಗಳಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ಸಭೆಗೂ ಕೆಲವು ಗಂಟೆಗಳ ಮೊದಲು, ಗಡಿ ಭದ್ರತಾ ಪಡೆ (BSF) ಜಮ್ಮುವಿನ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ನುಸುಳಲು ಯತ್ನಿಸುತ್ತಿದ್ದ ಏಳು ಉಗ್ರರನ್ನು ಕೊಂದು, ಪಾಕಿಸ್ತಾನ ರೇಂಜರ್‌ಗಳ ಪೋಸ್ಟ್ ಅನ್ನು ಸಹ ನಾಶಪಡಿಸಿದೆ ಎಂದು ಹೇಳಿತ್ತು.

ಭಾರತ-ಪಾಕಿಸ್ತಾನ ಗಡಿಯಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುವುದರ ಜೊತೆಗೆ, ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಶಾ ಮಾಹಿತಿ ಪಡೆದರು.

ಗಡಿ ಭದ್ರತಾ ಪಡೆ ಭಾರತ-ಪಾಕಿಸ್ತಾನ ಗಡಿಯನ್ನು ಕಾಯುತ್ತದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ದೇಶದ ವಿಮಾನ ನಿಲ್ದಾಣಗಳು, ಮೆಟ್ರೋ ಜಾಲಗಳು ಮತ್ತು ಇತರ ಪ್ರಮುಖ ಸ್ಥಾಪನೆಗಳ ಭದ್ರತೆಯ ಜವಾಬ್ದಾರಿಯನ್ನು ಹೊಂದಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಗುಪ್ತಚರ ಬ್ಯೂರೋ ನಿರ್ದೇಶಕ ತಪನ್ ದೇಕಾ ಮತ್ತು ಬಿಎಸ್‌ಎಫ್, ಸಿಐಎಸ್‌ಎಫ್ ಮತ್ತು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋದ ಮಹಾನಿರ್ದೇಶಕರು ಷಾ ಅವರೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

ಬುಧವಾರ ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿತು. ಗುರುವಾರ ಪಾಕಿಸ್ತಾನವು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಯತ್ನಿಸಿತ್ತು. ಆದರೆ ಭಾರತೀಯ ಪಡೆಗಳು ಅದನ್ನು ವಿಫಲಗೊಳಿಸಿದ್ದವು. ಈ ಘಟನೆಯಿಂದಾಗಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!