spot_img
Wednesday, April 1, 2026
spot_img

ಪಾಕಿಸ್ತಾನ ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಹಬ್ಬಿಸುತ್ತಿದೆ | ಸೂರತ್‌ನಲ್ಲಿ ಭಾರತದ ಎಸ್-400 ವ್ಯವಸ್ಥೆ, ವಾಯುನೆಲೆಗಳನ್ನು ನಾಶಪಡಿಸಿದ ಪಾಕಿಸ್ತಾನದ ಹೇಳಿಕೆ ಸುಳ್ಳು : ವ್ಯೋಮಿಕಾ ಸಿಂಗ್

ಜನಪ್ರತಿನಿಧಿ (ನವದೆಹಲಿ) : ನೆರೆ ರಾಷ್ಟ್ರ ಪಾಕಿಸ್ತಾನ ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಈ ಯುದ್ಧದ ಸಂದರ್ಭದಲ್ಲಿ ಹಬ್ಬಿಸುತ್ತಿದೆ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದ್ದಾರೆ, ಇಂದು(ಶನಿವಾರ) ವಿದೇಶಾಂಗ ಇಲಾಖೆ ಕಾರ್ಯದರ್ಶಿಗಳೊಂದಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸೂರತ್‌ನಲ್ಲಿ ಭಾರತದ ಎಸ್-400 ವ್ಯವಸ್ಥೆ ಮತ್ತು ವಾಯುನೆಲೆಗಳನ್ನು ನಾಶಪಡಿಸಿದ ಪಾಕಿಸ್ತಾನದ ಹೇಳಿಕೆ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಸಶಸ್ತ್ರ ಪಡೆಗಳು ಗುರುತಿಸಲಾದ ಮಿಲಿಟರಿ ಗುರಿಗಳ ಮೇಲೆ ಮಾತ್ರ ನಿಖರವಾದ ದಾಳಿ ನಡೆಸಿವೆ. ಪಾಕಿಸ್ತಾನ ನಿರಂತರ ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಹರಡುತ್ತಿದೆ, ಭಾರತೀಯ ಎಸ್-400 ವ್ಯವಸ್ಥೆಯನ್ನು ನಾಶಪಡಿಸಲಾಗಿದೆ, ಸೂರತ್‌ಗಢ ಮತ್ತು ಸಿರ್ಸಾದಲ್ಲಿನ ವಾಯುನೆಲೆಗಳನ್ನು ನಾಶಪಡಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಗಳು ಸುಳ್ಳು ಎಂದವರು ಹೇಳಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಇದನ್ನು ದೃಢಪಡಿಸಿದರು, ಪಾಕಿಸ್ತಾನ ಸುಳ್ಳು, ತಪ್ಪು ಸುದ್ದಿಯನ್ನು ಹರಡುತ್ತಿದೆ ಎಂದರು. ಪಾಕಿಸ್ತಾನ ಕೈಗೊಂಡ ಚಟುವಟಿಕೆಗಳ ಬಗ್ಗೆ ಪಾಕಿಸ್ತಾನದ ಹೇಳಿಕೆಗಳು ಸುಳ್ಳು, ತಪ್ಪು ಮಾಹಿತಿ ಮತ್ತು ಪ್ರಚಾರದಿಂದ ತುಂಬಿವೆ. ಪಾಕಿಸ್ತಾನ ಸರ್ಕಾರದ ಬೆಂಬಲಿತ ಸಂಸ್ಥೆಗಳು ಕೂಡ ಇದಕ್ಕೆ ಪ್ರೋತ್ಸಾಹ ನೀಡುತ್ತಿವೆ. ದೇಶದಲ್ಲಿನ ವಿವಿಧ ಮಿಲಿಟರಿ ಸ್ಥಾಪನೆಗಳ ಮೇಲೆ ದಾಳಿ ಮಾಡಿ ನಾಶಪಡಿಸುವ ಬಗ್ಗೆ ಅವರು ಮಾಡಿರುವ ಹೇಳಿಕೆಗಳು ಸಂಪೂರ್ಣವಾಗಿ ಸುಳ್ಳು ಎಂದಿದ್ದಾರೆ.

ಸೂರತ್‌ಗಢದ ಸಿರ್ಸಾದಲ್ಲಿರುವ ವಾಯುಪಡೆಯ ನೆಲೆಗಳು ನಾಶವಾಗಿವೆ ಎಂಬ ಹೇಳಿಕೆ, ಅದಮ್‌ಪುರದಲ್ಲಿರುವ ಎಸ್-400 ನೆಲೆ ನಾಶವಾಗಿದೆ ಎಂಬ ಹೇಳಿಕೆ ಶುದ್ಧ ಸುಳ್ಳೆಂದಿದ್ದಾರೆ.

ಭಾರತೀಯ ಸಶಸ್ತ್ರ ಪಡೆಗಳು ಹೆಚ್ಚಿನ ಕಾರ್ಯಾಚರಣೆಯ ಸನ್ನದ್ಧ ಸ್ಥಿತಿಯಲ್ಲಿವೆ, ಎಲ್ಲಾ ಪ್ರತಿಕೂಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಎದುರಿಸಿವೆ. ಪಾಕಿಸ್ತಾನದ ಕಡೆಯಿಂದ ಬರುವ ಪ್ರಚೋದನೆಗೆ ಭಾರತೀಯ ಸಶಸ್ತ್ರ ಪಡೆಗಳು ಉಲ್ಬಣಗೊಳ್ಳದಿರಲು ಬದ್ಧವಾಗಿವೆ ಎಂದು ಹೇಳಿದ್ದಾರೆ.

ಭಾರತವು ಪಾಕಿಸ್ತಾನದ ಸೇನಾ ನೆಲೆಗಳನ್ನು ಪ್ರತೀಕಾರದ ದಾಳಿಯಲ್ಲಿ ಗುರಿಯಾಗಿಸಿಕೊಂಡಿದೆ. ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾರತವು ಪಾಕಿಸ್ತಾನದ ಸೇನಾ ನೆಲೆಗಳನ್ನು ಪ್ರತೀಕಾರದ ದಾಳಿಯಲ್ಲಿ ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

https://x.com/adgpi/status/1921088019081425002

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!