spot_img
Monday, March 16, 2026
spot_img

ಕೊಲೆಯಾದ ಎಲ್ಲರ ಮನೆಗೆ ಹೋಗಬೇಕಿಲ್ಲ | ಬಿಜೆಪಿಯವರು ತಮ್ಮ ಬಳಿ ಸ್ಪಷ್ಟ ಮಾಹಿತಿ ಇದ್ದರೆ ತಿಳಿಸಲಿ : ಗುಂಡೂರಾವ್‌

ಜನಪ್ರತಿನಿಧಿ (ಮಂಗಳೂರು) : ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುವುದು ಮುಖ್ಯವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಮನೆಗೆ ಸಚಿವರು ಭೇಟಿ ನೀಡಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಸಚಿವರು ಹೀಗೆ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಹಾಸ್‌ ಶೆಟ್ಟಿ ಕೊಲೆ ಏಕೆ ಆಗಿದೆ ಎನ್ನುವುದನ್ನು ತಿಳಿದುಕೊಂಡಿರುವ ಸರ್ಕಾರ, ತಪ್ಪಿತಸ್ಥರನ್ನು ಬಂಧಿಸುವ ಮೂಲಕ ತನ್ನ ಜವಾಬ್ದಾರಿ ನಿರ್ವಹಿಸಿದೆ. ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಕೊಲೆ ಯಾರು ಮಾಡಿದ್ದಾರೆ ಅವರನ್ನು ಬಂಧಿಸಿದ್ದೇವೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎನ್ನುವ ಬಿಜೆಪಿಯವರ ಕಪೋಲಕಲ್ಪಿತ ಆರೋಪಗಳಿಗೆ ಉತ್ತರ ಕೊಡುವುದಕ್ಕೆ ಸಾಧ್ಯವಿಲ್ಲ. ಊಹಾಪೋಹದ ಹೇಳಿಕೆ ನೀಡುವುದು ಬಿಟ್ಟು ಬಿಜೆಪಿಯವರು ತಮ್ಮ ಬಳಿ ಸ್ಪಷ್ಟ ಮಾಹಿತಿ ಇದ್ದರೆ ತಿಳಿಸಲಿ ಎಂದು ಅವರು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹತ್ಯೆ ನಡೆದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಿದ್ದಾರೆ. ಕೆಲವೊಬ್ಬರು ನಕಲಿ ಹೆಸರಿನಲ್ಲಿ ಖಾತೆ ಬಳಸುತ್ತಿದ್ದು, ಅವರು ಯಾರು ಎನ್ನುವುದು ತಕ್ಷಣಕ್ಕೆ ಗೊತ್ತಾಗುವುದಿಲ್ಲ. ಸಂಬಂಧಿಸಿದ ಸಂಸ್ಥೆಗಳಿಗೆ ಪತ್ರ ಬರೆದು ಮಾಹಿತಿ ತಿಳಿದುಕೊಂಡು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಹರೀಶ್‌ ಪೂಂಜ ಹೇಳಿಕೆ :

ʼಕೋಮುಪ್ರಚೋದನಕಾರಿ ಹೇಳಿಕೆ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಆಗಬೇಕಾಗುತ್ತದೆ. ಅವರು ಮಾಡಿರುವ ವೈಯಕ್ತಕ ಟೀಕೆ ಕೀಳು ಅಭಿರಯಚಿಯಿಂದ ಕೂಡಿದೆ. ಅವರ ಮಾತುಗಳು ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿ. ಹೀಗಾಗಿ ಪ್ರತ್ಯುತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!