spot_img
Tuesday, March 17, 2026
spot_img

ಹೆಮ್ಮಾಡಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಡಾ.ಜಿ.ಶಂಕರ್ ಭೇಟಿ

ಹೆಮ್ಮಾಡಿ: ಕುಂದಾಪುರ ತಾಲೂಕಿನ ಪ್ರತಿಷ್ಠಿತ ಹೆಮ್ಮಾಡಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಹೆಮ್ಮಾಡಿಯ ಮತ್ಸ್ಯಸೌಧದಲ್ಲಿರುವ ಪ್ರಧಾನ ಕಛೇರಿಗೆ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ.ಜಿ.ಶಂಕರ್ ಮೇ 9 ಶುಕ್ರವಾರ ಭೇಟಿ ನೀಡಿದರು.

ಮೀನುಗಾರರ ಅಭಿವೃದ್ಧಿಗಾಗಿ ಹೆಮ್ಮಾಡಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಕಾರ್ಯಚಟುವಟಿಕೆ, ಆರ್ಥಿಕ ವಹಿವಾಟು, ಮೀನುಗಾರರಿಗೆ ನೀಡಲಾಗುವ ಸಾಲಸೌಲಭ್ಯಗಳನ್ನು ಗಮನಿಸಿದ ಡಾ.ಶಂಕರ್ ಮೆಚ್ಚುಗೆ ವ್ಯಕ್ತ ಪಡಿಸಿದ ಅವರು, ಸಂಘದ ರಜತ ಮಹೋತ್ಸವಕ್ಕೆ ಟ್ರಸ್ಟ್ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಹಟ್ಟಿಯಂಗಡಿ, ಸಂಸ್ಥೆಯ ಸಾಧನೆಯನ್ನು ವಿವರಿಸುತ್ತಾ, ಹೆಮ್ಮಾಡಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘವು ಪ್ರಸ್ತುತ ರಜತ ಮಹೋತ್ಸವ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ಸಾರ್ಥಕ 25 ವರ್ಷಗಳ ಸೇವೆಯ ಸಂಭ್ರಮದಲ್ಲಿದೆ. ಒಟ್ಟು ಐದು ಶಾಖೆಗಳನ್ನು ಹೊಂದಿದ್ದು ಹೆಮ್ಮಾಡಿಯಲ್ಲಿ ಸ್ವಂತ ಕಟ್ಟಡದಲ್ಲಿ ಪ್ರಧಾನ ಕಛೇರಿ ಹೊಂದಿದೆ. ಸಂಘವು 247 ಕೋಟಿ ರೂ. ವಾರ್ಷಿಕ ಆರ್ಥಿಕ ವಹಿವಾಟು ನಡೆಸಿದೆ. ರೂ.1 ಕೋಟಿ 27ಲಕ್ಷಕ್ಕೂ ಮಿಕ್ಕಿದ ವಾರ್ಷಿಕ ಲಾಭ ಗಳಿಸಿದೆ. ಸಂಘವು 30,000 ಸದಸ್ಯರನ್ನು ಹೊಂದಿದೆ. 850 ಮಹಿಳಾ ಸ್ವಸಹಾಯ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ. ಸಂಘದ ಸಾಧನೆಗೆ ಎನ್.ಸಿ.ಡಿ.ಸಿ ರಾಷ್ಟ್ರೀಯ ಪ್ರಶಸ್ತಿ, ರಾಜ್ಯ ಮಟ್ಟದ ಅತ್ಯುತ್ತಮ ಮೀನುಗಾರರ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಸಿಬ್ಬಂದಿಗಳು ಹಾಜರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!