spot_img
Tuesday, March 17, 2026
spot_img

ಮಂಗಳೂರು ವಿ. ವಿ ಮಟ್ಟದ  ಅಂತರ್ ಕಾಲೇಜು ಹಗ್ಗ ಜಗ್ಗಾಟ  ಸ್ಫರ್ಧೆ : ಆಳ್ವಾಸ್ ಚಾಂಪಿಯನ್ಸ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು  ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ  ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ  ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ  ಸ್ಫರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು.
ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡವು ಸೆಮಿಫೈನಲ್‌ನಲ್ಲಿ   ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ಫೈನಲ್‌ನಲ್ಲಿ  ಸರ್ಕಾರಿ  ಪ್ರಥಮ  ದರ್ಜೆ ಕಾಲೇಜು, ತೆಂಕನಿಡಿಯೂರು  ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು.
ಮಹಿಳಾ  ತಂಡವು ಸೆಮಿಫೈನಲ್ ನಲ್ಲಿ   ಡಾ. ಜಿ. ಶಂಕರ್ ಸರ್ಕಾರಿ  ಮಹಿಳಾ ಕಾಲೇಜು, ಅಜ್ಜರಕಾಡು ತಂಡವನ್ನು ಪರಾಭವಗೊಳಿಸಿ,  ಫೈನಲ್ ನಲ್ಲಿ  ಸರ್ಕಾರಿ  ಪ್ರಥಮ  ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು.
ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!