spot_img
Thursday, March 19, 2026
spot_img

ನವೋದಯ ಸ್ವ-ಸಹಾಯ ಗುಂಪುಗಳ ರಜತ ಸಂಭ್ರಮ | ತಾಯಂದಿರ ಬಾಳಲ್ಲಿ ‘ನವೋದಯ’ : ಡಿಕೆಶಿ ಬಣ್ಣನೆ

ಜನಪ್ರತಿನಿಧಿ (ಮಂಗಳೂರು) : ‘ಶುಭಂ ಕರೋತಿ ಕಲ್ಯಾಣಂ- ಆರೋಗ್ಯಂ ಧನಸಂಪದ, ಶತ್ರುಬುದ್ಧಿ ವಿನಾಶಾಯ ದೀಪಜ್ಯೋತಿರ್ನಮೋಸ್ತುತೇʼ ಎಂಬಂತೆ, 25 ವರ್ಷದ ಹಿಂದೆ ಎಸ್‌.ಎಂ.ಕೃಷ್ಣರವರು ಸಚಿವ ಸಂಪುಟದಲ್ಲಿ ಸಹಕಾರ ಸಚಿವನಾಗಿದ್ದಾಗ ಇದೇ ಜ್ಯೋತಿಯನ್ನು ಬೆಳಗಿಸಿದ್ದೆ. ಅಂದಿನಿಂದ ಈ ಜ್ಯೋತಿ ಉರಿದು, ಬೆಳೆದು ಲಕ್ಷಾಂತರ ತಾಯಂದಿರ ಬದುಕಲ್ಲಿ ಬದಲಾವಣೆ ತರುತ್ತಿದೆ ಎಂಬ ಹೆಮ್ಮೆ ನನಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಅವರು, ಇಂದು(ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಕೊಡಿಯಾಲ್‌ಬೈಲ್‌ನಲ್ಲಿ ಹಮ್ಮಿಕೊಂಡಿದ್ದ ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ನ ರಜತ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ರಾಜೇಂದ್ರ ಕುಮಾರ್‌ ಅವತ್ತಿಂದ ಇವತ್ತಿನವರೆಗೂ ಕರಾವಳಿಯ ಕ್ಷೇತ್ರದಲ್ಲಿ ಸಹಕಾರಿ ಧುರೀಣರಾಗಿ, ಯಾವುದೇ ಸ್ಥಾನ ಅಪೇಕ್ಷಿಸದೆ, ಜನರ- ತಾಯಂದಿರ ಸೇವೆ ಮಾಡುತ್ತಿದ್ದಾರೆ. ಆರ್ಥಿಕವಾಗಿ ಎಲ್ಲರಿಗೂ ಶಕ್ತಿ ಕೊಡಬೇಕೆಂದು ‘ನವೋದಯ ಚಾರಿಟೇಬಲ್‌ ಟ್ರಸ್ಟ್‌’ ರೂಪಿಸಿ, ಕಾರ್ಯನಿರ್ವಹಿಸುತ್ತಿರುವುದು ಅಭಿನಂದನಾರ್ಹ ಎಂದು ಅವರು ಹೇಳಿದರು.

ಹೆಣ್ಣುಮಕ್ಕಳ ತ್ಯಾಗ ಅರಿತವನು ಆ ಕುಟುಂಬದ ಶಕ್ತಿ ಬಲ್ಲ. ಲಕ್ಷಾಂತರ ತಾಯಂದಿರು ಮನೆಯ ಜ್ಯೋತಿ ಬೆಳಗಿ ದೇಶದ ಆಸ್ತಿಯಾಗಿ ಉಳಿದುಕೊಂಡಿದ್ದಾರೆ; ಇದೇ ನಾರಿಯ ಶಕ್ತಿ. ನಾವೆಲ್ಲಿಯೂ ತಂದೆ ಭಾಷೆ ಎನ್ನುವುದಿಲ್ಲ; ಮಾತೃಭಾಷೆ, ಮಾತೃಭೂಮಿ ಎನ್ನುತ್ತೇವೆ. ಅದು ಈ ನಾಡು ಸ್ತ್ರೀಯರನ್ನು ಕಾಣುವ ರೀತಿ ಎಂದು ಅವರು ಅಭಿಪ್ರಾಯ ಪಟ್ಟರು.

ನನ್ನ ರಾಜಕೀಯ ಜೀವನ ಆರಂಭವಾಗಿದ್ದೂ ಸಹಕಾರಿ ರಂಗದಿಂದ. ಈಗ ಉಪಮುಖ್ಯಮಂತ್ರಿಯಾಗಿ ಸಹಕಾರಿಯ ದೀಪ ಬೆಳಗಿದ್ದೇನೆ. ಕಟೀಲು, ಧರ್ಮಸ್ಥಳ, ಸುಬ್ರಹ್ಮಣ್ಯದಂಥ ಶಕ್ತಿ ಕ್ಷೇತ್ರ ಹೊಂದಿರುವ ಕರಾವಳಿ, ಧರ್ಮ- ಶಕ್ತಿ ಸಮ್ಮಿಲನದ ಪವಿತ್ರ ಭೂಮಿ. ಶೈಕ್ಷಣಿಕ- ಧಾರ್ಮಿಕ ಸ್ಥಳಗಳಿಗೆ ಇಲ್ಲಿ ಯಾವುದೇ ಕೊರತೆ ಇಲ್ಲ. ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿಯಾಗುತ್ತಿದೆ ಎಂದರೆ ಅದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿದ್ದಲ್ಲದೇ, ನಾವೆಲ್ಲರೂ ಒಗ್ಗಟ್ಟಾಗಿ ಈ ಜಿಲ್ಲೆಯ ಪರಂಪರೆ, ಇತಿಹಾಸ ಉಳಿಸಿ, ಗೌರವ ಕಾಪಾಡೋಣ. ಈ ಕರಾವಳಿಯನ್ನು ಇತಿಹಾಸದ ಪುಟಕ್ಕೆ ಸೇರಿಸಲು, ಈ ರಾಜ್ಯದ ಭವಿಷ್ಯಕ್ಕಾಗಿ ಕೆಲಸ ಮಾಡೋಣ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!