spot_img
Wednesday, April 1, 2026
spot_img

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನ

ಜನಪ್ರತಿನಿಧಿ (ಉಡುಪಿ): ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಇಂದು(ಸೋಮವಾರ) ವಿಧಿವಶರಾಗಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಯ್ತಾದರೂ ಫಲಿಸದೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಕೇಶ್ ಅವರ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್​ ಪೇಟೆ ಅವರು ಖಚಿತಪಡಿಸಿದ್ದಾರೆ.

ರಾಕೇಶ್ ಅವರ ಸಾವು ಅವರ ಅಭಿಮಾನಿಗಳು ಹಾಗೂ ಆಪ್ತ ಬಳಗಕ್ಕೆ ಶಾಕ್ ನೀಡಿದ್ದು, ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.

ರಾಕೇಶ್ ಅವರು 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆಯಾದರು. ರನ್ನರ್ ಅಪ್ ತಂಡದಲ್ಲಿ ಇದ್ದರು. ನಂತರದ ಸೀಸನ್ 3​ನಲ್ಲಿ ವಿನ್ನರ್ ಆದರು.

ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!