spot_img
Wednesday, April 1, 2026
spot_img

ಮೇ 27ರಂದೇ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ | ರಾಜ್ಯದಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ : ಹವಾಮಾನ ಇಲಾಖೆ

ಜನಪ್ರತಿನಿಧಿ (ಬೆಂಗಳೂರು) : ಈ ಬಾರಿ ಬೇಸಿಗೆ ಕಾಲ ಬೇಗನೆ ಅಂತ್ಯ ಕಾಣುತ್ತಿದ್ದು, 5 ದಿನ ಮುಂಚಿತವಾಗಿಯೇ ರಾಜ್ಯದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆಗಳಿವೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿ ಬಾರಿ ಜೂನ್ 1ಕ್ಕೆ ಮಾನ್ಸೂನ್ ಮಾರುತ ಆರಂಭವಾಗುವ ವಾಡಿಕೆ ಇತ್ತು. ಆದರೆ, ಈ ವರ್ಷ ಮೇ 27ರಂದೇ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ. ಜೂನ್ 1 ರಂದು ನೈಋತ್ಯ ಮಾರುತ ಕೇರಳವನ್ನು ಪ್ರವೇಶಿಸಿದರೆ, ಜೂನ್ 8ರೊಳಗೆ ಇಡೀ ದೇಶವನ್ನ ಆವರಿಸುತ್ತಿತ್ತು. ಆದರೆ, ಈ ಬಾರಿ 5 ದಿನ ಮುಂಚಿತವಾಗಿ ಮುಂಗಾರು ಮಳೆ ಆರಂಭವಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂಗಾರು 5 ದಿನದ ಮುಂಚಿತವಾಗಿ ಬರುತ್ತಿರುವುದು ಕಳೆದ 16 ವರ್ಷದ ಬಳಿಕ ಇದೇ ಮೊದಲಾಗಿದೆ. 2009ರಲ್ಲಿ ಮೇ.23 ರಂದು ಇದೇ ರೀತಿಯಲ್ಲಿ ಮುಂಗಾರು 5 ದಿನಗಳ ಮುಂಚೆ ಆರಂಭವಾಗಿತ್ತು. ಈ ಬಾರಿ ಮೇ 27ರಂದು ಆರಂಭವಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮೇ.28ರಂದು ಕರ್ನಾಟಕದಲ್ಲಿ ಮುಂಗಾರು ಆಗಮನವಾಗಲಿದ್ದು, ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಗಳಿವೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ, ಆದರೆ ,ರಾಜ್ಯದ ಇತರ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಜಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಅವರು ಹೇಳಿದ್ದಾರೆ.

ಜೂನ್ ಮತ್ತು ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಮೊದಲ ವಾರದ ನಡುವೆ ಸರಾಸರಿ ಮಳೆ 860 ಮಿ.ಮೀ. ಮಳೆಯಾಗುತ್ತಿತ್ತು. ಆದರೆ, ಈ ಬಾರಿ ಸಾಮಾನ್ಯಕ್ಕಿಂತ ಸುಮಾರು ಶೇ.5 ಹೆಚ್ಚು ಮಳೆಯಾಗಲಿದೆ. ಸರಾಸರಿ 900 ಮಿ.ಮೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂದಿನ ವಾರ ರಾಜ್ಯಾದ್ಯಂತ ಸಾಮಾನ್ಯ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!