spot_img
Wednesday, April 1, 2026
spot_img

ಪಾಕಿಸ್ತಾನದ ವಿರುದ್ಧ ನಡೆದ ಕಾರ್ಯಾಚರಣೆಯ ಕ್ರೆಡಿಟ್‌ ಭಾರತೀಯ ಸೇನೆಗಷ್ಟೇ ಸಲ್ಲಬೇಕು : ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಪಾಕಿಸ್ತಾನದ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಭಾರತಿಯ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಅದನ್ನು ಘೋಷಿಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವರದಿಗಾರರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇವತ್ತು ಎರಡೂ ದೇಶಗಳ ಸೇನಾಧಿಕಾರಿಗಳ ಸಭೆ ಇದೆ. ಅಲ್ಲಿ ಏನು ತೀರ್ಮಾನ ಆಗುತ್ತದೆಯೋ ಕಾದು ನೋಡೋಣ ಎಂದರು. 1971ರ ಯುದ್ಧಕ್ಕೂ- ಇವತ್ತಿನ ಸಂದರ್ಭಕ್ಕೂ ಹೋಲಿಕೆ ಮಾಡಿ ನಾನು ಮಾತನಾಡುವುದಿಲ್ಲ. ಆಗಿನ ಪರಿಸ್ಥಿತಿಗಳೇ ಬೇರೆ, ಇವತ್ತಿನ ಪರಿಸ್ಥಿತಿಗಳೇ ಬೇರೆ. ಟ್ರಂಪ್ ಟ್ವಿಟ್ ಬಗ್ಗೆಯಾಗಲಿ, ಪಾಕಿಸ್ತಾನದವರು ಮಾಡಿದ ಕದನ ವಿರಾಮ ಉಲ್ಲಂಘನೆಯ ಬಗ್ಗೆಯಾಗಲಿ ನಾನು ಮಾತನಾಡುವುದಿಲ್ಲ ಎಂದರು.

ಯುದ್ಧ ವಿರಾಮ ಘೋಷಣೆಗೂ ಮುನ್ನ ಸರ್ವ ಪಕ್ಷಗಳ ಸಭೆ ಕರೆಯಬೇಕಿತ್ತು. ವಿಶೇಷ ಅಧಿವೇಶನ ಕರೆಯಬೇಕಿತ್ತು. ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸಬಹುದಿತ್ತು ಎಂದು ಹೇಳಿದರು. ರಾಜ್ಯದಲ್ಲಿನ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಹೊರಗೆ ಕಳುಹಿಸಿದ್ದೇವೆ‌. ಮೈಸೂರಿನಲ್ಲಿ ಮೂವರು ಮಕ್ಕಳು ಮಾತ್ರ ಇದ್ದಾರೆ. ಅವರನ್ನು ಹೊರಗೆ ಕಳುಹಿಸಲು ತಾಂತ್ರಿಕ ಸಮಸ್ಯೆ ಇವೆ‌. ಗಂಡ ಪಾಕಿಸ್ತಾನಿ, ಹೆಂಡತಿ ಮೈಸೂರಿನವಳು. ಆದ್ದರಿಂದ ಮಕ್ಕಳು ಮಾತ್ರ ಇಲ್ಲೇ ಇದ್ದಾರೆ ಎಂದು ಪ್ರತಿಕ್ರಿಯಿಸಿದರು.

ಸರ್ಕಾರದ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತೇವೆ. ಯುದ್ಧ ವಿರಾಮ ಘೋಷಣೆ ಆಗಿರುವ ಕಾರಣ ಈ ಕಾರ್ಯಕ್ರಮ ನಡೆಸುತ್ತೇವೆ. ನುಡಿದಂತೆ ನಡೆದ ಸರ್ಕಾರ ಇದ್ದರೆ ಅದು ನಮ್ಮದು ಮಾತ್ರ. ಇದೇ ನಮ್ಮ ಸರ್ಕಾರದ ಯಶಸ್ಸು ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!