spot_img
Wednesday, April 1, 2026
spot_img

ಕುಂದಾಪುರ: 25 ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ ವಿತರಣೆ

ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿರುವ ಒಟ್ಟು 25 ಫಲಾನುಭವಿಗಳಿಗೆ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಹಕ್ಕುಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಸ್ತವ್ಯದ ಹಕ್ಕುಪತ್ರ ಎಲ್ಲರಿಗೂ ಅಗತ್ಯವಾಗಿ ದೊರಕಬೇಕು. 94 ಸಿ. ಯಡಿ ಅರ್ಜಿದಾರರು ಹಕ್ಕು ಪತ್ರ ವಂಚಿತರಾಗಬಾರದು ಎಂಬ ಉದ್ದೇಶದಿಂದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಹಕ್ಕುಪತ್ರ ಒದಗಿಸಲಾಗಿದೆ ಎಂದರು.

ಕುಂದಾಪುರ ತಾಲೂಕಿನ 12 ಗ್ರಾಮಗಳ ಒಟ್ಟು 25 ಜನ ಅರ್ಹ ಫಲನುಭವಿಗಳಿಗೆ ಹಕ್ಕು ಪತ್ರ ಒದಗಿಸಲಾಗಿದ್ದು ಹೆಸ್ಕುತ್ತೂರು 2, ಗೋಪಾಡಿ 1, ಅಮಾಸೆಬೈಲ್ 1, ಉಳ್ತೂರು 2, ಹೊಂಬಾಡಿ ಮಂಡಾಡಿ 2, ವಕ್ವಾಡಿ 4, ಹಾಲಾಡಿ 4, ಹಾರ್ದಳ್ಳಿ ಮಂಡಳ್ಳಿ 3, ಹಳ್ಳಾಡಿ ಹರ್ಕಾಡಿ 1, ಕುಂಭಾಶಿ 1, ಹೆಂಗಾವಳ್ಳಿ 1, ಕಾಳಾವರ 4, ಗ್ರಾಮದ ಫಲಾನುಭವಿಗಳು ತಮ್ಮ ವಾಸ್ತವ್ಯದ ಮನೆಯಡಿಯ ಭೂಮಿ ಹಕ್ಕು ಪಡೆದುಕೊಂಡರು.

ಈ ಸಂದರ್ಭದಲ್ಲಿ ಕುಂದಾಪುರ ತಹಶೀಲ್ದಾರಾದ ಪ್ರದೀಪ್ ಕುರುಡೇಕರ್, ಸಂಬಂಧಪಟ್ಟ ಅಧಿಕಾರಿ ವರ್ಗದವರು ಫಲಾನುಭವಿಗಳು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!