spot_img
Wednesday, April 1, 2026
spot_img

ಮೂಡ್ಲಕಟ್ಟೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಫ್ಲೋರೆನ್ಸ್ ನೈಟಿಂಗೇಲ್ ರವರ ಜನ್ಮ ದಿನದ ಅಂಗವಾಗಿ ವಿಶ್ವ ದಾದಿಯರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ದಾದಿಯರ ದಿನದ ಪ್ರಯುಕ್ತ ಬಿ ಎಸ್ ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬೇಸಿಕ್ ಲೈಫ್ ಸಪ್ಪೋರ್ಟ್ ಮತ್ತು ಪ್ರಥಮ ಚಿಕಿತ್ಸಾ ತರಬೇತಿಯನ್ನು ಆಯೋಜಿಸಲಾಗಿತ್ತು . ಮುಖ್ಯ ಅತಿಥಿ ಮೆಡಿಷುರ್ ಹೆಲ್ತ್ ಕೇರ್ ಅಕಾಡೆಮಿಯ ಡೈರೆಕ್ಟರ್ ಹಾಗೂ ಪ್ರಮಾಣಿತ ತರಬೇತುದಾರರಾದ ಡಾ. ಆಸಿಫ್ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿ ದಾದಿಯರ ದಿನಾಚರಣೆಯಂದು ದಾದಿಯರಿಗೆ ಪ್ರಾಮಾಣಿಕತೆ ಮತ್ತು ವಿನಮ್ರತೆಯು ಮುಖ್ಯ ಎಂದು ಮಾತನಾಡಿದರು.

ಪ್ರಾಂಶುಪಾಲರಾದ ಪ್ರೊ. ಜೆನಿಫರ್ ಫ್ರೀಡಾ ಮನೆಜಸ್ ಸ್ವಾಗತಿಸಿದರು. ಕಾರ್ಯಕ್ರಮ ಸಲಹೆಗಾರರಾದ ಪ್ರೊ. ಚಂದ್ರಶೇಖರ್ ರವರು ದಾದಿಯರ ದಿನದ ಮಹತ್ವವನ್ನು ಸಾರಿದರು . ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಆಯೇಷಾ ರಫೀದ ಕಾರ್ಯಕ್ರಮ ನಿರೂಪಿಸಿ, ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ‌ಎಸ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!