spot_img
Monday, March 16, 2026
spot_img

ವಿ.ಕೆ.ಆರ್.ಶಾಲೆ ಕುಂದಾಪುರ: ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ

ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ, ಎಚ್.ಎಂ.ಎಂ. ಮತ್ತು ವಿ. ಕೆ. ಆರ್.ಶಾಲೆಗಳಲ್ಲಿ 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ೮ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ರ್‍ಯಾಂಕ್ ಗಳಿಕೆಗೆ ಪ್ರೋತ್ಸಾಹಿಸಿದ ಆಡಳಿತ ಮಂಡಳಿ ಮತ್ತು ಶಿಕ್ಷಕರ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೋಧಿಸಿದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಬಿ. ಎಮ್.ಸುಕುಮಾರ ಶೆಟ್ಟಿ ಮತ್ತು ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತಾಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅಭಿವಂದಿಸಿ ಸಾಧಕರ ಪೋಷಕರಿಗೂ ಅಭಿನಂದಿಸಿದರು. ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ನಾರಾಯಣ ನಾಯಕರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಪ್ರಾಂಶುಪಾಲೆ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಜಗದೀಶ್ ಆಚಾರ್,ಸಹಾಯಕ ಮುಖ್ಯಶಿಕ್ಷಕ ಚಂದ್ರಶೇಖರ ಶೆಟ್ಟಿ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಶಿಕ್ಷಕರಾದ ಸುರೇಂದ್ರ ಶೆಟ್ಟಿ ಜಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!