spot_img
Wednesday, April 1, 2026
spot_img

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನಿ ಸುಶ್ಮಿತಾ ಎಸ್.ಗಾಣಿಗ ಅವರಿಗೆ ಶಾಸಕರಿಂದ ಸನ್ಮಾನ

ಗಂಗೊಳ್ಳಿ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟಕ್ಕೆ 2ನೇ ರ್‍ಯಾಂಕ್ ಪಡೆದ ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್.ಗಾಣಿಗ ಅವರನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸನ್ಮಾನಿಸಿ ಗೌರವಿಸಿದರು.

ಗಂಗೊಳ್ಳಿಯ ಅವರ ಮನೆಗೆ ಸೋಮವಾರ ಭೇಟಿ ನೀಡಿದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸುಶ್ಮಿತಾ ಗಾಣಿಗ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿ ಅಭಿನಂದಿಸಿದರು.

ಗಂಗೊಳ್ಳಿ ಗ್ರಾಪಂ ಸದಸ್ಯರಾದ ಮಮತಾ ಎಸ್.ಗಾಣಿಗ, ಚಂದ್ರ ಖಾರ್ವಿ ಲೈಟ್‌ಹೌಸ್, ರಾಜೇಂದ್ರ ಶೇರುಗಾರ್, ಗುರುರಾಜ್ ಖಾರ್ವಿ, ಪಿ.ಬಿ.ನಾಗರಾಜ್ ಖಾರ್ವಿ, ಅಶ್ವಿನಿ ಖಾರ್ವಿ, ನಾಗರತ್ನ ಶೇರುಗಾರ್, ಬೈಂದೂರು ಮಂಡಲ ಎಸ್‌ಸಿ ಮೋರ್ಚಾ ಅಧ್ಯಕ್ಷ ಅಶೋಕ್ ಎನ್.ಡಿ., ಗ್ರಾಪಂ ಮಾಜಿ ಸದಸ್ಯರಾದ ಬಿ.ಗಣೇಶ ಶೆಣೈ, ಬಿ.ರಾಘವೇಂದ್ರ ಪೈ, ಪ್ರಶಾಂತ ಖಾರ್ವಿ, ಪ್ರಮುಖರಾದ ಶಿವಾನಂದ ಗಾಣಿಗ, ಜಯಂತ್ ಶೇರುಗಾರ್, ರಘುನಾಥ ಖಾರ್ವಿ, ನಿತಿನ್ ಖಾರ್ವಿ, ಸಂದೀಪ ಖಾರ್ವಿ, ಪ್ರಮೋದ ಗಾಣಿಗ ಗಂಗೊಳ್ಳಿ, ಗಂಗಾಧರ ಗಾಣಿಗ ಗಂಗೊಳ್ಳಿ, ಬಿಜೆಪಿ ಕಾರ್ಯಕರ್ತರು, ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!