spot_img
Monday, March 16, 2026
spot_img

ಪೆಹಲ್ಗಾಮ್‌ ದಾಳಿ : ಶಂಕಿತ ಉಗ್ರರ ಫೋಟೋ ಬಿಡುಗಡೆ | ಸುಳಿವು ಕೊಟ್ಟವರಿಗೆ ಇಪ್ಪತ್ತು ಲಕ್ಷ ರೂ. ಬಹುಮಾನ ಘೋಷಣೆ

ಜನಪ್ರತಿನಿಧಿ (ನವ ದೆಹಲಿ) : ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್‌ ನಲ್ಲಿ ದಾಳಿ ಮಾಡಿದ ಮೂವರು ಶಂಕಿತ ಉಗ್ರರ ಪತ್ತೆಗೆ ಅವರ ಫೋಟೋಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ಮಾಹಿತಿ ನೀಡಿದವರಿಗೆ ಇಪ್ಪತ್ತು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಏ.೨೨ ರಂದು ಪೆಹಲ್ಗಾಮ್‌ ನಲ್ಲಿ ೨೬ ಮಂದಿ ಅಮಾಯಕರನ್ನು ಭೀಕರವಾಗಿ ಹತ್ತೆಉ ಮಾಡಿದ್ದರು.

ಅಲ್ಲಲ್ಲಿ ಪೋಸ್ಟರ್‌ ಅಂಟಿಸಿರುವ ಪೊಲೀಸರು ಭಯೋತ್ಪಾದಕ ಮುಕ್ತ ಜಮ್ಮು ಕಾಶ್ಮೀರ ಎಂದು ಬರೆದಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಮಾತ್ರವಲ್ಲದೇ ಶಂಕಿತ ಉಗ್ರರ ಬಗ್ಗೆ ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದೂ ಪೊಲೀಸರು ಹೇಳಿದ್ದಾರೆ.

ಪೆಹಲ್ಗಾಮ್‌ ನಿಂದ ಆರು. ಕಿ.ಮೀ ದೂರದಲ್ಲಿರುವ ಬೈಸರನ್‌ ಹುಲ್ಲುಗಾವಲಿನಲ್ಲಿದ್ದ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದರು. ಕುಟುಂಬದವರ ಎದುರೇ ೨೬ ಜನರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಇದಕ್ಕೆ ಪ್ರತಿಯಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಮೇಲೆ ದಾಳಿ ಮಾಡಿ ಒಂಬತ್ತು ಉಗ್ರ ನೆಲೆಗಳನ್ನು ನಾಶಗೊಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!