spot_img
Monday, March 16, 2026
spot_img

ಕುಕ್ಕೆ ದೇವಸ್ಥಾನ ಸಮಿತಿಗೆ ರೌಡಿ ಶೀಟರ್ ಆಯ್ಕೆ ವಿವಾದ | ಸರ್ಕಾರದ ಹಸ್ತಕ್ಷೇಪ ಇಲ್ಲ, ಸದಸ್ಯರ ಆಯ್ಕೆಗೆ ಬಿಟ್ಟಿದ್ದು : ರಾಜ್ಯ ಕಾಂಗ್ರೆಸ್‌

ಜನಪ್ರತಿನಿಧಿ (ಮಂಗಳೂರು/ಬೆಂಗಳೂರು) : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರು ಯಾರಾಗಬೇಕು ಎನ್ನುವುದು ಅಲ್ಲಿನ ಸದಸ್ಯರ ಆಯ್ಕೆಗೆ ಬಿಟ್ಟಿದ್ದು, ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಹೇಗೆ ಸಾಧ್ಯ? ಎಂದು ರಾಜ್ಯ ಕಾಂಗ್ರೆಸ್‌ ಪ್ರಶ್ನಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿರುವ ಬೆನ್ನಲ್ಲೇ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಈ ರೀತಿ ಪ್ರಶ್ನಿಸಿದೆ.

ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ ಹೊರಹಾಕಿದೆ.

ಇಂಥದ್ದೊಂದು ಸಾಮಾನ್ಯ ಜ್ಞಾನ ಇಲ್ಲದ ರಾಜ್ಯ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿಕೊಂಡು ಜನರ ದಾರಿ ತಪ್ಪಿಸಲು ಹೊರಟಿದೆ ಎಂದು ಆರೋಪಿಸಿದೆ.

ಪಾರ್ಟಿ ವಿಥ್ ಎ ಡಿಫರೆನ್ಸ್ ಎಂದು ಹೇಳಿಕೊಳ್ಳುವ ಬಿಜೆಪಿಯವರು ತಮ್ಮ ಪಕ್ಷದ ‘ರೌಡಿ ಮೋರ್ಚಾ’ ಘಟಕದ ಮೂಲಕ ನಟೋರಿಯಸ್ ರೌಡಿ ಶೀಟರ್ ಸೈಲೆಂಟ್ ಸುನೀಲ್, ವೈಯಾಲಿಕಾವಲ್ ರೌಡಿ ಶೀಟರ್ ಮಲ್ಲಿಕಾರ್ಜುನ್ ಅಲಿಯಾಸ್ ಫೈಟರ್ ರವಿ, ಮಂಗಳೂರು ರೌಡಿಶೀಟರ್ ಸುಹಾಸ್ ಶೆಟ್ಟಿ, ಕಲಬುರಗಿಯ ರೌಡಿ ಶೀಟರ್ ಮಣಿಕಂಠ ರಾಥೋಡ್, ಮೈಸೂರಿನ ಕಾರ್ತಿಕ್, ಅನೇಕಲ್ ಪುರಸಭೆಗೆ ರೌಡಿ ಶೀಟರ್‌ ಮಂಜುನಾಥ್ .ಎಸ್ ಎಂಬಾತನ ನಾಮನಿರ್ದೇಶನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲಿ ಇಂಥವರಿಗೆ ಬೆನ್ನೆಲುಬಾಗಿ ನಿಂತು ಪೋಷಿಸಿ – ಬೆಳೆಸಿ ತಮ್ಮ ಬೆಳೆ ಬೇಯಿಸಿಕೊಳ್ಳುವ ಇವರು, ಪ್ರಜಾಸತ್ತಾತ್ಮಕ ಮಾದರಿಯಲ್ಲಿ ಚುನಾವಣೆ ಮೂಲಕ ಆಯ್ಕೆಯಾದ ವಿಚಾರದಲ್ಲಿ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸಲು ಹೊರಟಿರುವುದು ವಿಪರ್ಯಾಸ ಎಂದು ಟೀಕಿಸಿದೆ.

ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಹಾರ, ತುರಾಯಿ ಹಾಕಿ ಸ್ವಾಗತಿಸಿದವರು ನೀವೇ ಅಲ್ಲವೇ? ಇಡೀ ದೇಶದಲ್ಲಿ ಬಿಜೆಪಿ ಶಾಸಕರು, ಸಂಸದರು ನಡೆಸಿರುವ ಅತ್ಯಾಚಾರ, ಕೊಲೆ, ದೌರ್ಜನ್ಯ ಮುಂತಾದ ಪ್ರಕರಣಗಳ ಪಟ್ಟಿಮಾಡುತ್ತಾ ಹೋದರೆ ಅದೇ ಒಂದು ಮಹಾಗ್ರಂಥವೇ ಆಗಬಹುದೇನೊ! ಮೊದಲು ನೀವು ಕೊಲೆಗಡುಕರು, ಡಕಾಯಿತರು, ಸ್ತ್ರೀ ಪೀಡಕರು, ಕಳ್ಳ‌ಕದೀಮರಿಂದ ದೂರವಿರಿ. ನಂತರ ಊರಿಗೆ ಉಪದೇಶ ಕೊಡುವಿರಂತೆ! ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!