spot_img
Monday, March 16, 2026
spot_img

ಕುಂದಾಪುರ : ತಂದೆ, ಮಗ ಆತ್ಮಹತ್ಯೆ | ತಾಯಿ ಗಂಭೀರ

ಜನಪ್ರತಿನಿಧಿ (ತೆಕ್ಕಟ್ಟೆ) : ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿ, ತಂದೆ ಮತ್ತು ಮಗ ಮೃತಪಟ್ಟು, ತಾಯಿಯ ಪರಿಸ್ಥಿತಿ ಗಂಭೀರವಾದ ಘಟನೆ ಮೇ 15(ಗುರುವಾರ) ನಡೆದಿದೆ. ಇಂದು ಮುಂಜಾನೆ ಮನೆಯ ಸಮೀಪದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಮೃತಪಟ್ಟವರು.

ಕಂಚುಗಾರುಬೆಟ್ಟು ನಿವಾಸಿ, ತಾರಾ ದೇವಾಡಿಗ ಅವರ ಪರಿಸ್ಥಿತಿ ಗಂಭೀರವಾಗಿದ್ದು, ತತ್ ಕ್ಷಣವೇ ಕೋಟೇಶ್ವರದ ಆಸ್ಪತ್ರೆಗೆ ಸಾಗಿಸಲಾಗಿದೆ.

ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಕೋಟ ಪೊಲೀಸ್‌ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದು, ಅವರ ಆಕ್ರಂದನದ ಧ್ವನಿ ಕೇಳಿದ ಸ್ಥಳೀಯ ನಿವಾಸಿಗಳಾದ ಸಂತೋಷ್ ಶೆಟ್ಟಿ, ಶ್ರೀನಾಥ್ ಶೆಟ್ಟಿ ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿದರು.

ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದ್ದು, ಪರಿಸರದಲ್ಲಿ ಮೌನ ಮಡುಗಟ್ಟಿದೆ. ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು, ಸಾಲಬಾಧೆ ಕಾಡುತ್ತಿರುವುದರಿಂದ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!