spot_img
Thursday, April 2, 2026
spot_img

ಕೋಟೇಶ್ವರ ಕಾಲೇಜಿನಲ್ಲಿ ಯುವನಿಧಿ ಯೋಜನೆ ನೋಂದಣಿ ಅಭಿಯಾನ

ಕುಂದಾಪುರ: ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಇಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಕುರಿತು ಪ್ರಚಾರ ಮತ್ತು ನೋಂದಣಿ ಅಭಿಯಾನ ಮೇ 14ರಂದು ನಡೆಯಿತು.

ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಅವರು ಸರ್ಕಾರದ ಈ ಯೋಜನೆ ನಿರುದ್ಯೋಗಿ ಯುವಪೀಳಿಗೆಗೆ ತುಂಬಾ ಅನುಕೂಲಕರವಾಗಿದೆ ಪದವಿ ಮುಗಿದು ಉದ್ಯೋಗ ಸಿಗದ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೂಚಿಸಿದರು.

ಕುಂದಾಪುರ ತಾಲೂಕಿನಲ್ಲಿ 758 ಜನರಿಗೆ 1,18,000, 500 ಬಂದಿದೆ. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಫಲಾನುಭವಿಗಳು ಕುಂದಾಪುರದಲ್ಲಿ ಇದ್ದಾರೆ ಎಂದು ಅವರು ತಿಳಿಸಿದರು.

ಉದ್ಯೋಗ ವಿನಿಮಯ ಕಛೇರಿಯ ಸಿಬ್ಬಂದಿ ದೀಕ್ಷಿತ್ ಅವರು ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪಡೆದುಕೊಳ್ಳುವ ಬಗೆ ಮತ್ತು ಮಾನದಂಡಗಳ ಕುರಿತು ಪೂರ್ಣ ಮಾಹಿತಿ ನೀಡಿದರು.

ಪ್ರಾಶುಪಾಲರಾದ ರಾಮರಾಯ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯರಾದ ಝಾಹಿರ್ ಮತ್ತು ಕಾಲೇಜಿನ ಉಪನ್ಯಾಸಕರಾದ ಡಾ. ಶೇಖರ್ ಬಿ, ಕಾರ್ತಿಕ್ ಪೈ ಉಪಸ್ಥಿತರಿದ್ದರು. ಅಸಿಸ್ಟೆಂಟ್ ಪೆÇ್ರಫೆಸರ್ ರಂಜಿತ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಚೈತನ್ಯ ವಂದಿಸಿ, ರಶ್ಮಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!