spot_img
Monday, February 16, 2026
spot_img

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್‌ | ಸಾಮಾಜಿಕ ಸೇವೆಗಾಗಿ ಡಾಕ್ಟರೇಟ್ ಗೌರವ

ಜನಪ್ರತಿನಿಧಿ (ಬೆಂಗಳೂರು/ಕೋಲಾರ) : ಸಿಎಂ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡುವುದಾಗಿ ಕೋಲಾರದ ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಘೋಷಣೆ ಮಾಡಿದೆ. ಸಮಾಜ ಸೇವೆ ವಿಭಾಗದಲ್ಲಿ ಅವರನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ.

15ನೇ ಘಟಿಕೋತ್ಸವದಲ್ಲಿ ಘೋಷಣೆ

ಕೋಲಾರದ ದೇವರಾಜು ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ 15ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಸಂಸ್ಥೆಯ ಕುಲಪತಿ ಜಿ.ಎಚ್‌. ನಾಗರಾಜ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಸಾಮಾಜಿಕ ಸೇವೆಗಾಗಿ ಡಾಕ್ಟರೇಟ್ ಗೌರವ

ಸಿಎಂ ಸಿದ್ದರಾಮಯ್ಯ ಅವರು 2 ಬಾರಿ ಮುಖ್ಯಮಂತ್ರಿಯಾಗಿ ಮತ್ತು 16 ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ. ಇಷ್ಟು ಮಾತ್ರವಲ್ಲದೆ ಅವರ ಅಧಿಕಾರದ ಅವಧಿಯಲ್ಲಿ ಜನಪರ ಐದು ಗ್ಯಾರಂಟಿ ಯೋಜನೆ ಜಾರಿ ಮಾಡುವ ಮೂಲಕ ಜನಪ್ರಿಯ ಯೋಜನೆಗಳ ಜಾರಿಯಿಂದಾಗಿ ಬಡ ಮತ್ತು ಮಧ್ಯಮ ವರ್ಗಕ್ಕೆ ಆಧಾರವಾಗುವಂತಹ ಯೋಜನೆ ಜಾರಿಗೆ ತಂದಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.

ದೇವರಾಜು ಅರಸು ಟ್ರಸ್ಟ್ ನ ಮಾಜಿ ಟ್ರಸ್ಟಿಯಾಗಿರುವ ಸಿಎಂ ಸಿದ್ದರಾಮಯ್ಯ ಇಂದು ನಡೆದ ಘಟಿಕೋತ್ಸವದಲ್ಲಿ 377 ವಿದ್ಯಾರ್ಥಿಗಳಿಗೆ ಪದವಿ ಹಾಗೂ 23 ಮಂದಿಗೆ ಚಿನ್ನದ ಪದಕ ಪ್ರದಾನ ಮಾಡಿದರು. ಆರ್.ಎಲ್ ಜಾಲಪ್ಪ ಆಸ್ಪತ್ರೆ ಸಭಾಂಗಣದಲ್ಲಿ ಘಟಿಕೋತ್ಸವ ಕಾರ್ಯಕ್ರಮ ಜರುಗಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!