spot_img
Wednesday, April 1, 2026
spot_img

ಎಸ್.ಎಸ್.ಎಲ್.ಸಿ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಫಲಿತಾಂಶಕ್ಕೆ ಈಗಿಂದಲೆ ಕಾರ್ಯಯೋಜನೆ ಹಾಕಿಕೊಳ್ಳಿ-ಶಾಸಕ ಗಂಟಿಹೊಳೆ

ಬೈಂದೂರು: ಎಸ್ ಎಸ್ ಎಲ್ ಸಿ ಪ್ರತಿ ವಿದ್ಯಾರ್ಥಿಯ ಜೀವನದಲ್ಲಿ ಅತೀ ಪ್ರಮುಖವಾದ ಘಟ್ಟ ಹಾಗಾಗಿ ಶಾಲಾ ಶಿಕ್ಷಕರು ಸೇರಿದಂತೆ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಗಳನ್ನು ಸರಿಯಾಗಿ ಅರಿತು ಕೊಳ್ಳಬೇಕು ಹಾಗೂ ಪ್ರತಿ ಹಂತದಲ್ಲಿಯೂ ಪ್ರತಿ ಶಾಲೆ ಹಾಗೂ ಪ್ರತಿ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಿ ನಿರಂತರವಾಗಿ ಪರಸ್ಪರ ಸಮನ್ವಯ ಸಾಧಿಸಿದರೆ ಮಾತ್ರ ಉತ್ತಮ ಫಲಿತಾಂಶ ಹೊರ ಹೊಮ್ಮಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರಸ್ತುತ ಸಾಲಿನ ಫಲಿತಾಂಶದ ಕುರಿತು ಪರಾಮರ್ಶೆ ನಡೆಸಿ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಫಲಿತಾಂಶ ಪಡೆಯುವ ಸಲುವಾಗಿ ಈಗಿನಿಂದಲೇ ಕಾರ್ಯಯೋಜನೆ ಹಾಕಿಕೊಳ್ಳಿ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಶಿಕ್ಷಕವೃಂದಕ್ಕೆ ಕರೆ ನೀಡಿದರು.

ಅವರು ಬೈಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೈಂದೂರು ಕ್ಷೇತ್ರದ ಎಸ್ ಎಸ್ ಎಲ್ ಸಿ ಫಲಿತಾಂಶದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿ‌ಆರ್ ಸಿಸಿ, ಸಿ‌ಆರ್ ಪಿ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಸ್ಥರದಲ್ಲಿನ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಶಾಲೆಗಳಲ್ಲಿ ಮಕ್ಕಳು ಓದುವ ಹವ್ಯಾಸ ರೂಡಿಸಿಕೊಳ್ಳುವ ದೃಷ್ಟಿಯಿಂದ ಮತ್ತು ವಿದ್ಯಾರ್ಥಿಗಳ ಜ್ಞಾನ ಹಾಗೂ ಕೌಶಲ್ಯ ಹೆಚ್ಚಿಸಲು ಸಹಕಾರಿಯಾಗುವಂತಹ ಪುಸ್ತಕಗಳನ್ನು 2 ಲಕ್ಷ ಮೊತ್ತದಲ್ಲಿ ಈಗಾಗಲೇ ಖರೀದಿಸಲಾಗಿದ್ದು ಕ್ಷೇತ್ರ ವ್ಯಾಪ್ತಿಯ ಎಲ್ಲಾ ಸರಕಾರಿ ಪ್ರೌಢ ಶಾಲೆಗಳಿಗೆ ಜೂನ್ ಮೊದಲ ವಾರದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಶಾಸಕರು ತಿಳಿಸಿದ್ದಾರೆ.

ಸಭೆಯಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ್, ಬೈಂದೂರು ಹಾಗೂ ಕುಂದಾಪುರ ವಲಯಯ ವ್ಯಾಪ್ತಿಯ ಬಿ.ಆರ್. ಸಿ, ಸಿ.ಆರ್.ಪಿ, ಬಿ.ಆರ್. ಪಿ, ಬಿ.ಐ.ಈ.ಆರ್.ಟಿ, ಈ.ಸಿ.ಓ, ಟಿ.ಪಿ ಇ.ಒ ಮೊದಲಾದ ಶಿಕ್ಷಣ ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!