spot_img
Monday, March 16, 2026
spot_img

ಇಂದಿರಾ ಕ್ಯಾಂಟೀನ್‌ ನಲ್ಲಿ 7 ಕೋಟಿ ರೂ. ಅವ್ಯವಹಾರ : ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಅಮಾನತು

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರು ದಕ್ಷಿಣ ವಲಯದ ಇಂದಿರಾ ಕ್ಯಾಂಟೀನ್‌ನಲ್ಲಿ ಸುಮಾರು 7 ಕೋಟಿ ರೂ.ಗಳ ಅವ್ಯವಹಾರ ನಡೆಸಿದ್ದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಲಯದ ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಪಿ. ಅವರನ್ನು ಅಮಾನತುಗೊಳಿಸಲಾಗಿದೆ.

ಪಾಲಿಕೆಯ ದಕ್ಷಿಣ ವಲಯಕ್ಕೆ ಆಹಾರ ಪೂರೈಕ ಮಾಡಿದ ಚೆಫ್ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಬಿಲ್ ಪಾವತಿಯಲ್ಲಿ 7 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆಸಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆರೋಗ್ಯಾಧಿಕಾರಿಯಾಗಿದ್ದ ಡಾ.ಕಲ್ಪನಾ ಪಿ ಅವರು ಆರ್ಡರ್ ಗಳನ್ನು ಪರಿಶೀಲಿಸದೆ ಅಂದಾಜು ರೂ. 9.72 ಕೋಟಿ ಪಾವತಿಸಿದ್ದಾರೆ. ಆದರೆ ಅದಕ್ಕೆ ವಾಸ್ತವವಾಗಿ ಪಾವತಿಸಬೇಕಾದದ್ದು ಕೇವಲ ರೂ. 2.27 ಕೋಟಿ ಮಾತ್ರ,. ಇದರಿಂದ ಹೆಚ್ಚುವರಿಯಾಗಿ ಸುಮಾರು 7 ಕೋಟಿ ರೂ. ಪಾವತಿಸಿದ್ದಕ್ಕಾಗಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಇದೀಗ ಮೊತ್ತದ ವಸೂಲಾತಿಗೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಲಿಕೆ ಆಡಳಿತ ಈ ಪ್ರಕರಣದ ಕೂಲಂಕಷ ತನಿಖೆ ನಡೆಸುತ್ತಿದೆ. ಹೆಚ್ಚುವರಿ ಜವಾಬ್ದಾರಿಯನ್ನು ಮತ್ತೊಬ್ಬ ಅಧಿಕಾರಿಗೆ ವಹಿಸಲಾಗಿದೆ.

ಜೊತೆಗೆ ಡಾ.ಸುರೇಶ್ ಜಿ.ಕೆ. ಅವರಿಗೆ ದಕ್ಷಿಣ ವಲಯದ ಹೆಚ್ಚುವರಿ ಆರೋಗ್ಯಾಧಿಕಾರಿ ಜವಾಬ್ದಾರಿ ನೀಡಲಾಗಿದೆ. ಅವರು ಪ್ರಸ್ತುತ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಉಪ ಆರೋಗ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!